ಬೆಂಗಳೂರು: ಯಲಹಂಕ ತಾಲ್ಲೂಕಿನ ಹೆಸರಘಟ್ಟದ ಮುತ್ತೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಹಕ್ಕಿಜ್ವರ ಪ್ರಕರಣ ದೃಢಪಟ್ಟಿರುವುದರಿಂದ, ಒಂದು ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ರೋಗಪೀಡಿತ ವಲಯ, 1ರಿಂದ 10 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ‘ಜಾಗೃತ ವಲಯ’ ಎಂದು ಘೋಷಿಸಿ ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.

ರೋಗಪೀಡಿತ ವಲಯದಲ್ಲಿ ಕೋಳಿ,ಕೋಳಿ ಮರಿ, ಮೊಟ್ಟೆ, ಆಹಾರ, ಗೊಬ್ಬರ ವನ್ನು ಸರ್ಕಾರದ ಮಾರ್ಗಸೂಚಿ ಅನ್ವಯಕ್ಷಿಪ್ರ ಕಾರ್ಯಪಡೆಗಳನ್ನು ರಚಿಸಿ ಎಲ್ಲ ವನ್ನೂ ನಿಯಮಾನುಸಾರ ವಿಲೇವಾರಿ ಮಾಡಲಾಗಿದೆ. ಈ ಪ್ರದೇಶದಲ್ಲಿ ಸೋಂಕು ನಿವಾರಣಾ ಕಾರ್ಯ ಪ್ರಗತಿಯಲ್ಲಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಶಂಕಿತ ಪ್ರಕರಣವಿದ್ದಲ್ಲಿ ರಕ್ತ ಪರೀಕ್ಷೆ ಮಾಡಲು ಕ್ರಮ ವಹಿಸಲಾಗಿದೆ. ಜಾಗೃತ ವಲಯದಲ್ಲಿ ಎಲ್ಲ ಜಾತಿಯ ಹಕ್ಕಿ ಪಕ್ಷಿಗಳ ಸಾಗಾಣಿಕೆ, ಚಲನವಲನ ಮತ್ತು ಪ್ರದರ್ಶನ ಮುಂತಾದ ಚಟುವಟಿಕೆ ಗಳನ್ನು ನಿರ್ಬಂಧಿಸಲು ರೋಗಪೀಡಿತ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಗಳಲ್ಲಿ ಐದು ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-4-21953067

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.