ಬೆಂಗಳೂರು: ಆರ್.ಟಿ.ನಗರ ವ್ಯಾಪ್ತಿಯ ಕನಕನಗರ ಬಳಿ ಏಳೆಂಟು ಮಂದಿ ಯುವಕರ ಗುಂಪು, ಯುವತಿ ಮತ್ತು ಮೂವರು ಯುವಕರ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

3-4 ದಿನಗಳ ಹಿಂದೆ ಈ ಘಟನೆ ನಡೆದಿರುವ ಸಾಧ್ಯತೆಯಿದ್ದು, ಹಲ್ಲೆ ನಡೆಸಿದ ವಿಡಿಯೊ ಜಾಲತಾಣದಲ್ಲಿ ಹರಿದಾಡುತ್ತಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಪುಂಡರ ಗುಂಪು ಯುವತಿ ಮತ್ತು ಯುವಕರ ಮೇಲೆ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಯುವತಿಯ ಬಾಯಿ ಮತ್ತು ಕೈ ಭಾಗದಲ್ಲಿ ರಕ್ತಸ್ರಾವ ಆಗಿತ್ತು. ಆಕೆಯ ಮೊಬೈಲ್ ಕೂಡ ಒಡೆದುಹೋಗಿದೆ ಎಂದು ಹೇಳಲಾಗಿದೆ.

ಧೂಮಪಾನ ಮಾಡುತ್ತಿದ್ದ ಕಾರಣ ವಾಗ್ವಾದ ನಡೆದು, ಬಳಿಕ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದವರು ಹಾಗೂ ಹಲ್ಲೆ ನಡೆಸಿದ ವ್ಯಕ್ತಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.