ಬೆಂಗಳೂರು: ಮರ್ಸಿಡಿಸ್ ಬೆನ್ಜ್ ಕಾರಿನ ಸನ್ ರೂಫ್‌ನಲ್ಲಿ ನಿಂತು ಮೋಜು– ಮಸ್ತಿ ಮಾಡುತ್ತ ಅಪಾಯಕಾರಿ ರೀತಿಯಲ್ಲಿ ಸಂಚರಿಸಿದ್ದವರ ವಿರುದ್ಧ ಸದಾಶಿವನಗರ ಸಂಚಾರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಠಾಣೆ ವ್ಯಾಪ್ತಿಯ ರಸ್ತೆಗಳಲ್ಲಿ ಶನಿವಾರ ರಾತ್ರಿ ಸಂಚರಿಸಿದ್ದ ಕಾರಿನ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಅದನ್ನು ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾರನ್ನೂ ಜಪ್ತಿ ಮಾಡಲಾಗಿದೆ’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಹೇಳಿದರು.

‘ಕಾರನ್ನು ಅಪಾಯಕಾರಿಯಾಗಿ ಚಲಾಯಿಸಿದ್ದ ಯುವಕರು, ಸನ್ ರೂಫ್‌ನಲ್ಲಿ ನಿಂತುಕೊಂಡು ಕೂಗಾಡಿ ಮೋಜು–ಮಸ್ತಿ ಮಾಡುತ್ತಿದ್ದ ದೃಶ್ಯ ವಿಡಿಯೊದಲ್ಲಿತ್ತು. ಇಂಥ ವರ್ತನೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿತ್ತು. ಸಾರ್ವಜನಿಕರ ಜೀವಕ್ಕೂ ಅಪಾಯ ತಂದೊಡ್ಡುವ ಸಂಭವವಿತ್ತು. ವಿಡಿಯೊ ಗಮನಕ್ಕೆ ಬರುತ್ತಿದ್ದಂತೆ ಕಾರನ್ನು ಪತ್ತೆ ಮಾಡಿ ಕ್ರಮ ಜರುಗಿಸಲಾಗಿದೆ’ ಎಂದೂ
ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.