ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಸ್ಕಾಂನ 55 ಬ್ಯಾಟರಿ ಕದ್ದಿದ್ದವರ ಬಂಧನ

Last Updated 16 ಜೂನ್ 2022, 16:24 IST
ಅಕ್ಷರ ಗಾತ್ರ

ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ಸರಬರಾಜಿಗಾಗಿ ಆರ್‌ಎಂಎ ಬಾಕ್ಸ್‌ಗಳಲ್ಲಿ ಅಳವಡಿಸಿದ್ದ ಬ್ಯಾಟರಿ ಕಳ್ಳತನ ಮಾಡಿದ್ದ ಆರೋಪದಡಿ ಇಬ್ಬರನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದಾರೆ.

‘ವಿನೋದ್‌ಕುಮಾರ್ ಹಾಗೂ ಜಗದೀಶ್ ಬಂಧಿತರು. ಇವರಿಂದ ₹ 4.65 ಲಕ್ಷ ಮೌಲ್ಯದ 55 ಬ್ಯಾಟರಿ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಠಾಣೆ ವ್ಯಾಪ್ತಿಯ ಸ್ಥಳಗಳಿಗೆ ವಿದ್ಯುತ್ ಸರಬರಾಜು ಮಾಡಲು ಬೆಸ್ಕಾಂನಿಂದ ಆರ್‌ಎಂಎ ಬಾಕ್ಸ್‌ಗಳನ್ನು ನಿರ್ಮಿಸಲಾಗಿದೆ. ಇದರಲ್ಲಿ ಅಳವಡಿಸಿದ್ದ 30 ಬ್ಯಾಟರಿಗಳು ಫೆಬ್ರುವರಿ 1ರಂದು ಕಳ್ಳತನ ಆಗಿದ್ದವು. ಈ ಸಂಬಂಧ ಬೆಸ್ಕಾಂ ಅಧಿಕಾರಿಗಳು ದೂರು ನೀಡಿದ್ದರು.’

‘ಪ್ರಕರಣದ ತನಿಖೆ ಕೈಗೊಂಡಾಗ ಆರಂಭದಲ್ಲಿ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇತ್ತೀಚೆಗೆ ಖಚಿತ ಮಾಹಿತಿ ಕಲೆಹಾಕಿ ಆರೋಪಿಗಳನ್ನು ಬಂಧಿಸಲಾಗಿದೆ. ಬಸವೇಶ್ವರನಗರ ಠಾಣೆ ವ್ಯಾಪ್ತಿಯಲ್ಲೂ ಆರೋಪಿಗಳು ಬ್ಯಾಟರಿ ಕಳ್ಳತನ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT