ಬೆಂಗಳೂರು: 80 ಕೆ.ವಿ. ಸಾಮರ್ಥ್ಯದ ವಿದ್ಯುತ್ ಸಂಪರ್ಕ ನೀಡುವುದಕ್ಕೆ ಪರಿವರ್ತಕ ಅಳವಡಿಸುವುದಕ್ಕೆ ಮಂಜೂರಾತಿ ನೀಡಲು ₹ 2,500 ಲಂಚ ಪಡೆಯುತ್ತಿದ್ದ ಬೆಸ್ಕಾಂ ಎಂ.ಟಿ. ವಿಭಾಗದ ಕಾರ್ಯನಿರ್ವಾಹಕ ಎಂಜಿ ನಿಯರ್ ಜಗದೀಶ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗುರುವಾರ ಬಂಧಿಸಿದೆ.

ಯಲಹಂಕ ನಿವಾಸಿಯಾದ ವಿದ್ಯುತ್ ಗುತ್ತಿಗೆದಾರರೊಬ್ಬರು ಖಾಸಗಿ ಉಗ್ರಾಣವೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬಂಧ ಅರ್ಜಿ ಸಲ್ಲಿಸಿದ್ದರು.

ಈ ಕಡತ ಆರೋಪಿ ಅಧಿಕಾರಿ ಬಳಿ ತಲುಪಿತ್ತು. ಅನುಮೋದನೆ ನೀಡಲು ₹ 5,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ₹ 2,500 ನೀಡುವಂತೆ ಅರ್ಜಿದಾರರಿಗೆ ಸೂಚಿಸಿದ್ದರು. ಈ ಕುರಿತು ಗುತ್ತಿಗೆದಾರರು ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು. ಗುತ್ತಿಗೆದಾರನಿಂದ ಹಣ ಪಡೆಯುತ್ತಿದ್ದಾಗ ಗುರುವಾರ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು, ಜಗದೀಶ್ ಅವರನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.