ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹2 ಲಕ್ಷ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಂಜಿನಿಯರ್

Last Updated 9 ನವೆಂಬರ್ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು: ಹೈಟೆನ್ಷನ್ ವಿದ್ಯುತ್ ಮಾರ್ಗವನ್ನು ಲೋಟೆನ್ಷನ್‌ ಆಗಿ ಪರಿವರ್ತಿಸಲು ₹2 ಲಕ್ಷ ಲಂಚ ಪಡೆಯುತ್ತಿದ್ದ ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ವಿ.ನರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಎಲೆಕ್ಟ್ರಿಕಲ್ ಗುತ್ತಿಗೆದಾರ ರವೀಂದ್ರ ಜೀತ್ ಸಿಂಗ್ ಎಂಬುವರು ಕಗ್ಗದಾಸನಪುರದಲ್ಲಿ ವಿದ್ಯುತ್ ಮಾರ್ಗ ಪರಿವರ್ತನೆಗೆ ಕೆ.ಜಯಚಂದ್ರ ಅವರ ಹೆಸರಿನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕೆಲಸಕ್ಕೆ ₹2 ಲಕ್ಷ ಲಂಚ ನೀಡಬೇಕೆಂದು ನರೇಶ್ ಬೇಡಿಕೆ ಇಟ್ಟಿದ್ದರು. ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿನ ಎಚ್ಎಎಲ್ ಬಳಿಯ ಬೆಸ್ಕಾಂ ಕಚೇರಿಯಲ್ಲಿ ಲಂಚ ಪಡೆಯುವಾಗ ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT