ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2587 ವಿನೂತನ ವಿನ್ಯಾಸದ ಟ್ರಾನ್ಸ್‌ಫಾರ್ಮರ್

Last Updated 12 ಮೇ 2022, 19:38 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸ್ತುತ ಕೈಗೊಂಡಿರುವ ಟ್ರಾನ್ಸ್‌ಫಾರ್ಮರ್ ನಿರ್ವಹಣಾ ಅಭಿಯಾನದ ಜತೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 2587 ವಿನೂತನ ವಿನ್ಯಾಸದ ಟ್ರಾನ್ಸ್‌ಫಾರ್ಮರ್ ಅಳವಡಿಸುವ ಕಾರ್ಯವನ್ನು ಬೆಸ್ಕಾಂ ಕೈಗೊಂಡಿದೆ.

ಪಾದಚಾರಿ ರಸ್ತೆ ಹಾಗೂ ಚರಂಡಿಮೇಲಿರುವ ಎರಡು, ಮೂರು ಅಥವಾ ನಾಲ್ಕು ಕಂಬಗಳ ಮೇಲಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು ವಿನೂತನ ವಿನ್ಯಾಸದ ಮೂಲಕ 11 ಮೀಟರ್ ಎತ್ತರದ ‘ಸ್ಪನ್ ಪೋಲ್’ ಉಪಯೋಗಿಸಿ ಅಳವಡಿಸಲಾಗುತ್ತಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕ್ರಮದಿಂದಾಗಿ ಪಾದಚಾರಿ ರಸ್ತೆಗಳಲ್ಲಿ ಜನರ ಸುಗಮ ಸಂಚಾರಕ್ಕೆ ಸಹಕಾರಿಯಾಗಲಿದೆ. ಅಲ್ಲದೆ ಟ್ರಾನ್ಸ್‌ಫಾರ್ಮರ್‌ಗಳಿಂದ ಸಂಭವಿಸಹುದಾದ ವಿದ್ಯುತ್ ಅವಘಡಗಳನ್ನು ತಪ್ಪಿಸಬಹುದಾಗಿದೆ. 2587 ವಿದ್ಯುತ್ ಪರಿವರ್ತಕಗಳು ಬೆಂಗಳೂರು ನಗರದ ಪಾದಚಾರಿ ಮಾರ್ಗ ಹಾಗೂ ಚರಂಡಿ ಮೇಲಿರುವುದನ್ನು ಬೆಸ್ಕಾಂ ಮತ್ತು ಬಿಬಿಎಂಪಿಯ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿ ಗುರುತಿಸಿದ್ದಾರೆ ಎಂದು ವಿವರಿಸಿದ್ದಾರೆ.

ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಈ ಅಭಿಯಾನ ನಡೆಸುತ್ತಿದ್ದು, ಬೆಂಗಳೂರು ನಗರ ಜಿಲ್ಲೆಯೊಂದರಲ್ಲಿ 1719 ಟ್ರಾನ್ಸ್‌ಫಾರ್ಮರ್‌ಗಳ ನಿರ್ವಹಣೆಯನ್ನು ಬೆಸ್ಕಾಂ ಮುಗಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT