ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಸ್ಕಾಂ ನೂತನ ಕಚೇರಿ ಕಟ್ಟಡಗಳ ಉದ್ಘಾಟನೆ ಇಂದು

Last Updated 5 ಮಾರ್ಚ್ 2023, 20:59 IST
ಅಕ್ಷರ ಗಾತ್ರ

ಬೆಂಗಳೂರು: ಎಚ್.ಎಸ್.ಆರ್‌. ಬಡಾವಣೆಯಲ್ಲಿ ಬೆಸ್ಕಾಂ ನಿರ್ಮಿಸಿರುವ ‘ಸೆಂಟರ್‌ ಆಫ್‌ ಎಕ್ಸ್‌ಲೆನ್ಸ್‌’ ಕಟ್ಟಡ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ನಿರ್ಮಿಸಿರುವ ಒಟ್ಟು 17 ಹೊಸ ಕಟ್ಟಡಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಉದ್ಘಾಟಿಸಲಿದ್ದಾರೆ.

ಹೊಸ ಕಟ್ಟಡಗಳ ಉದ್ಘಾಟನೆ ಜತೆಗೆ 8 ಹೊಸ ಕಚೇರಿ ಕಟ್ಟಡಗಳಿಗೆ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಅವರು ಇದೇ ಸಂದರ್ಭದಲ್ಲಿ ನೆರವೇರಿಸಲಿದ್ದಾರೆ.

ಬೆಂಗಳೂರು ನಗರ , ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಜಿಲ್ಲೆಗಳಲ್ಲಿ ಬೆಸ್ಕಾಂನ ಹೊಸ ಉಪ ವಿಭಾಗೀಯ ಕಚೇರಿ ಕಟ್ಟಡಗಳನ್ನು ಒಟ್ಟು ₹77.15 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಎಚ್.ಎಸ್.ಆರ್. ಬಡಾವಣೆಯಲ್ಲಿ ತಲೆ ಎತ್ತಿರುವ ‘ಸೆಂಟರ್‌ ಆಫ್‌ ಎಕ್ಸ್‌ಲೆನ್ಸ್‌’ ಕಟ್ಟಡವನ್ನು ₹28.96 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ರಾಮನಗರದಲ್ಲಿರುವ ಬೆಸ್ಕಾಂ ತರಬೇತಿ ಕೇಂದ್ರವನ್ನು ₹26.55 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ‘ಸೆಂಟರ್‌ ಆಫ್‌ ಎಕ್ಸ್‌ಲೆನ್ಸ್‌ ಕೇಂದ್ರವು ಬೆಸ್ಕಾಂನ ಪ್ರಮುಖ ಸಂಪನ್ಮೂಲ ವ್ಯವಸ್ಥೆಗಳನ್ನು ಹೊಂದಿದೆ. ವಿದ್ಯುತ್‌ ಉತ್ಪಾದನೆ, ಪ್ರಸರಣ, ವಿತರಣಾ ಜಾಲದ ಕುರಿತಾದ ವಿವರಗಳನ್ನು ಪ್ರದರ್ಶಿಸಲು ಮೀಸಲಾದ ಕೇಂದ್ರ ಇದಾಗಿದೆ. ಇಂಧನ ಸಚಿವ ವಿ. ಸುನಿಲ್‌ ಕುಮಾರ್‌ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT