8 ಜಿಲ್ಲೆಗಳಲ್ಲಿ ವಿದ್ಯುತ್ ಅದಾಲತ್ ಇಂದು
ಬೆಂಗಳೂರು: ವಿದ್ಯುತ್ ಸಂಬಂಧಿತ ಸಮಸ್ಯೆ ಪರಿಹಾರಕ್ಕೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಯ 89 ಹಳ್ಳಿಗಳಲ್ಲಿ ಶನಿವಾರ ವಿದ್ಯುತ್ ಅದಾಲತ್ ನಡೆಯಲಿದೆ.
ಬೆಸ್ಕಾಂನ ಹಿರಿಯ ಅಧಿಕಾರಿಗಳು ಅದಾಲತ್‌ನಲ್ಲಿ ಭಾಗವಹಿಸಿ, ಕುಂದುಕೊರತೆ ಆಲಿಸಿ ಸ್ಥಳದಲ್ಲೇ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬೆಸ್ಕಾಂ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯ ನಾಲ್ಕು ತಾಲ್ಲೂಕಿನ 13 ಹಳ್ಳಿ, ಬೆಂಗಳೂರು ಗ್ರಾಮಾಂತರದ ನಾಲ್ಕು ತಾಲ್ಲೂಕುಗಳ ಏಳು ಹಳ್ಳಿಗಳಲ್ಲಿ ಅದಾಲತ್ ನಡೆಯಲಿದೆ.
ಜೂನ್ 18ರಂದು ನಡೆದಿದ್ದ ವಿದ್ಯುತ್ ಅದಾಲತ್‌ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಒಟ್ಟು 1,142 ಮನವಿ ಸ್ವೀಕೃತಗೊಂಡಿದ್ದವು. 321 ಮನವಿಗಳಿಗೆ ಬೆಸ್ಕಾಂ ಅಧಿಕಾರಿಗಳು ಸ್ಥಳದಲ್ಲೇ ಪರಿಹಾರ ಒದಗಿಸಿದ್ದರು. ಉಳಿದ 821 ಮನವಿ ಮುಂದಿನ ಕ್ರಮಕ್ಕಾಗಿ ಮೇಲಧಿಕಾರಿಗಳಿಗೆ ರವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.