ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಟ್ಟಹಲಸೂರು ಗ್ರಾಮ ಪಂಚಾಯಿತಿ: ಅನಿಲ್‌ಗೆ ಲಾಟರಿ ಮೂಲಕ ಒಲಿದ ಅಧ್ಯಕ್ಷ ಸ್ಥಾನ

Published 29 ಜನವರಿ 2024, 22:30 IST
Last Updated 29 ಜನವರಿ 2024, 22:30 IST
ಅಕ್ಷರ ಗಾತ್ರ

ಯಲಹಂಕ: ಲಾಟರಿ ಮೂಲಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಿ.ಎಸ್‌.ಅನಿಲ್‌ಕುಮಾರ್‌ ಬೆಟ್ಟಹಲಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.‌

ಒಟ್ಟು 26 ಸದಸ್ಯಬಲ ಹೊಂದಿರುವ ಪಂಚಾಯಿತಿಯಲ್ಲಿ 9 ಮಂದಿ ಬಿಜೆಪಿ ಬೆಂಬಲಿತ, 17 ಮಂದಿ ಕಾಂಗ್ರೆಸ್‌ ಬೆಂಬಲಿತ ಸದಸ್ಯರಿ ದ್ದಾರೆ. ಇದುವರೆಗೂ ಪಂಚಾಯಿತಿಯು ಕಾಂಗ್ರೆಸ್‌ ತೆಕ್ಕೆಯಲ್ಲಿತ್ತು.

ನೂತನ ಅಧ್ಯಕ್ಷರ ಆಯ್ಕೆಗಾಗಿ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಯಾಗಿ ರಾಮ ಮೂರ್ತಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಅನಿಲ್‌ಕುಮಾರ್‌ ನಾಮಪತ್ರ ಸಲ್ಲಿಸಿದ್ದರು. ಅನಿರೀಕ್ಷಿತ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ನಾಲ್ವರು, ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ ಚಲಾಯಿಸಿದರು. ಇಬ್ಬರಿಗೂ ತಲಾ 13 ಮತಗಳು ಚಲಾವಣೆಯಾಗಿ ಸಮಬಲದ ಫಲಿತಾಂಶ ಹೊರಬಿದ್ದಿತು. ಅಂತಿಮವಾಗಿ ಲಾಟರಿ ಪ್ರಕ್ರಿಯೆ ಮೂಲಕ ಅಧ್ಯಕ್ಷರ ಆಯ್ಕೆ ನಡೆಯಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT