ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಯೇ ಬೆಟ್ಟಿಂಗ್ ಅಡ್ಡೆ; ₹ 5 ಲಕ್ಷ ಜಪ್ತಿ

Last Updated 12 ಅಕ್ಟೋಬರ್ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು: ತನ್ನ ಮನೆಯನ್ನೇ ಅಡ್ಡೆ ಮಾಡಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ ₹ 5 ಲಕ್ಷ ನಗದು ಜಪ್ತಿ ಮಾಡಿದ್ದಾರೆ.

‘ರಾಮಮೂರ್ತಿನಗರ ಠಾಣೆ ವ್ಯಾಪ್ತಿಯ ಕೆ. ಚನ್ನಸಂದ್ರದ ಮನೆಯೊಂದರಲ್ಲಿ ವಾಸವಿದ್ದ ಆರೋಪಿ, ಅಲ್ಲಿಯೇ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಮನೆ ಮೇಲೆ ದಾಳಿ ಮಾಡಿ ಆತನನ್ನು ಸೆರೆ ಹಿಡಿಯಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಐಪಿಎಲ್ ಆರಂಭವಾದ ದಿನದಿಂದಲೂ ಆರೋಪಿ ಬೆಟ್ಟಿಂಗ್ ನಡೆಸುತ್ತಿದ್ದ. ಮೊಬೈಲ್ ಆ್ಯಪ್ ಹಾಗೂ ಜಾಲತಾಣಗಳ ಮೂಲಕ ಕ್ರಿಕೆಟ್ ಪಂದ್ಯಗಳ ಮಾಹಿತಿ ತಿಳಿದುಕೊಂಡು, ಸೋಲು–ಗೆಲುವು ಲೆಕ್ಕಾಚಾರದಲ್ಲಿ ಹಣ ಕಟ್ಟಿಸಿಕೊಳ್ಳುತ್ತಿದ್ದ.’

‘ಚೆನ್ನೈ ಸೂಪರ್ ಕಿಂಗ್ಸ್– ದೆಹಲಿ ಕಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್–ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯಗಳ ಮೇಲೆ ಆರೋಪಿ ಬೆಟ್ಟಿಂಗ್ ಕಟ್ಟಿಸಿಕೊಂಡಿದ್ದಕ್ಕೆ ಪುರಾವೆಗಳು ಸಿಕ್ಕಿವೆ’ ಎಂದೂ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT