ಮಂಗಳವಾರ, ಜೂನ್ 28, 2022
23 °C

ಐಪಿಎಲ್‌ ಬೆಟ್ಟಿಂಗ್: ₹ 3.50 ಲಕ್ಷ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದು, ಆತನಿಂದ ₹ 3.50 ಲಕ್ಷ ಜಪ್ತಿ ಮಾಡಿದ್ದಾರೆ.

‘ಬನಶಂಕರಿ ಪೂರ್ಣಪ್ರಜ್ಞ ಬಡಾವಣೆ ಬಳಿ ಆರೋಪಿ, ಸಾರ್ವಜನಿಕರಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದ ಮಾಹಿತಿ ಆಧರಿಸಿ ಆತನನ್ನು ಬಂಧಿಸಿದ್ದು, ಮೊಬೈಲ್ ಫೋನ್‌ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಐಪಿಎಲ್ ಪಂದ್ಯಾವಳಿ ಆರಂಭವಾದಂದಿನಿಂದ ಬೆಟ್ಟಿಂಗ್ ನಡೆಸುತ್ತಿದ್ದ. ಮೇ 20ರಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಪಂದ್ಯ ಕುರಿತು ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ. ಬಂದ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು