ಬೆಂಗಳೂರು: ‘ಮಂಡ್ಯ ಜಿಲ್ಲೆಯ ಬಿ.ಜಿ. ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯವು ಬೆಂಗಳೂರಿನ ನಗರೂರಿನಲ್ಲಿರುವ ಬಿಜಿಎಸ್ ಎಂಸಿಎಚ್ ಆವರಣದಲ್ಲಿ ಜೂನ್ 20ರಂದು ವಿ.ವಿ.ಯ ನೂತನ ಕ್ಯಾಂಪಸ್ ಆರಂಭಿಸಲಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಎಂ.ಎ. ಶೇಖರ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕ್ಯಾಂಪಸ್ ಉದ್ಘಾಟಿಸಲಿದ್ದಾರೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಕೋಟ್ನ ಅರ್ಶ ವಿದ್ಯಾಮಂದಿರದ ಪರಮಾತ್ಮಾನಂದ ಸ್ವಾಮೀಜಿ, ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಮಾದಾರ ಚನ್ನಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ’ ಎಂದು ಹೇಳಿದರು.

‘ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸಂಸದ ಡಾ.ಕೆ.ಸುಧಾಕರ್, ಶಾಸಕರಾದ ಎಸ್.ಆರ್.ವಿಶ್ವನಾಥ್, ಎನ್.ಶ್ರೀನಿವಾಸಯ್ಯ ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.