ಬೆಂಗಳೂರು: ವೃದ್ಧೆಯೊಬ್ಬರ ಮೇಲೆ ಹಲ್ಲೆ ಮಾಡಿ ಚಿನ್ನದ ಸರ ಕಿತ್ತೊಯ್ದಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ ನರೇಂದ್ರ ಬಾಬು (46) ಎಂಬುವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯ ವಿದ್ಯಮಾನ ನಗರದಲ್ಲಿ ಏಪ್ರಿಲ್ 20ರಂದು ಬಾಡಿಗೆ ಕೇಳುವ ನೆಪದಲ್ಲಿ ವೃದ್ಧೆಯೊಬ್ಬರ ಮೇಲೆ ಹಲ್ಲೆ ಮಾಡಿ, 48 ಗ್ರಾಂ ಚಿನ್ನದ ಸರ ಸುಲಿಗೆ ಮಾಡಲಾಗಿತ್ತು. ಗಾಯಗೊಂಡ ವೃದ್ಧೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಅವರು ನೀಡಿದ್ದ ದೂರಿನಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು’ ಎಂದು ಪೊಲೀಸರು ಹೇಳಿದರು.

‘ಸುಲಿಗೆ ಪ್ರಕರಣದಲ್ಲಿ ನರೇಂದ್ರ ಬಾಬು ಭಾಗಿಯಾದ ಬಗ್ಗೆ ಮಾಹಿತಿ ಇತ್ತು. ಅವರು ಭದ್ರಾವತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಕುಟುಂಬಸ್ಥರಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.