ಕೃಷಿ ಜಮೀನು ಸ್ವಾಧೀನಕ್ಕೆ ವಿರೋಧ
ದೇವನಹಳ್ಳಿ ಸುತ್ತಮುತ್ತ 13 ಹಳ್ಳಿಗಳಲ್ಲಿ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ಸಭೆಯಲ್ಲಿ ಖಂಡಿಸಲಾಯಿತು. ‘ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು ರೈತ ಮುಖಂಡರ ಮೇಲೆ ಪೊಲೀಸರನ್ನು ಬಳಸಿಕೊಂಡು ಸರ್ಕಾರ ದಬ್ಬಾಳಿಕೆ ನಡೆಸಿದೆ. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲರಿಗೆ ಇಲ್ಲಿನ ಕೃಷಿಕರ ಹಿತಕ್ಕಿಂತ ಉದ್ದಿಮೆದಾರರ ಹಿತಾಸಕ್ತಿಯೇ ಮುಖ್ಯವಾಗಿದೆ’ ಎಂದು ಪ್ರತಿಭಟನಕಾರರು ಟೀಕಿಸಿದರು.