ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್‌ ಜೋಡೊ ಟ್ವಿಟರ್‌: ನಿರ್ಬಂಧ ರದ್ದುಪಡಿಸಿದ ಹೈಕೋರ್ಟ್

Last Updated 8 ನವೆಂಬರ್ 2022, 15:39 IST
ಅಕ್ಷರ ಗಾತ್ರ

ಬೆಂಗಳೂರು:ಕೆಜಿಎಫ್-2 ಚಿತ್ರದ ಸಂಗೀತವನ್ನು ಅನುಮತಿರಹಿತವಾಗಿ ಬಳಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಮತ್ತು ಭಾರತ್ ಜೋಡೊ ಯಾತ್ರೆಯ ಅಧಿಕೃತ ಟ್ವಿಟ್ಟರ್ ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದ್ದವಾಣಿಜ್ಯ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಈ ಸಂಬಂಧ ಐಎನ್‌ಎಸ್‌ ವಕ್ತಾರೆ ಸುಪ್ರಿಯಾ ಶ್ರಿನೇತ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ಸಂಜೆ ತುರ್ತು ವಿಚಾರಣೆ ನಡೆಸಿ ಸೋಮವಾರವಷ್ಟೇ (ನ.7) ನಗರದ ವಾಣಿಜ್ಯ ನ್ಯಾಯಾಲಯ ನೀಡಿದ್ದ ಆದೇಶವನ್ನು ರದ್ದುಪಡಿಸಿತು. ಅಂತೆಯೇ, ‘ಈಗಾಗಲೇ ಅಪ್‌ಲೋಡ್‌ ಮಾಡಿರುವ ಸ್ಕ್ರೀನ್‌ ಶಾಟ್‌ಗಳನ್ನು ಕೋರ್ಟ್‌ಗೆ ನೀಡಿ‘ ಎಂದು ಮೇಲ್ಮನವಿದಾರರಿಗೆ ಆದೇಶಿಸಿತು.

ವಿಚಾರಣೆ ವೇಳೆ ಕಾಂಗ್ರೆಸ್‌ ಪರ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಮತ್ತು ಹೈಕೋರ್ಟ್‌ನ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಹಾಜರಾಗಿ, ’ಭಾರತ್‌ ಜೋಡೊ ಯಾತ್ರೆಯ ವೇಳೆ ಹಿನ್ನೆಲೆ ಸಂಗೀತವಾಗಿ ಅಳವಡಿಸಿಕೊಳ್ಳಲಾಗಿತ್ತು ಎಂದು ಆಪಾದಿಸಲಾಗಿದೆ. ಇದರನ್ವಯ ವಿಚಾರಣಾ ನ್ಯಾಯಾಲಯಟ್ವಿಟರ್‌ ಖಾತೆ ನಿರ್ಬಂಧಿಸಿ ಮಧ್ಯಂತರ ಆದೇಶ ನೀಡಿದೆ. ಇದು ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ. ಆದ್ದರಿಂದ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು’ ಎಂದು ಕೋರಿದರು.

‘ನಾವು ಈಗ ಬಳಸಿರುವ ಎಲ್ಲ ಆಕ್ಷೇಪಾರ್ಹ ಸಂಗೀತದ ನಕಲುಗಳ ಲಿಂಕ್‌ಗಳನ್ನು ಟ್ವಿಟರ್ ಸೇರಿದಂತೆ ಎಲ್ಲ ಸೋಷಿಯಲ್‌ ಮಾಧ್ಯಮ ತಾಣಗಳಿಂದ ತೆಗೆದು ಹಾಕಲಾಗುವುದು’ಎಂಬ ಮುಚ್ಚಳಿಕೆ ನೀಡಿದರು.ಇದನ್ನು ಮಾನ್ಯ ಮಾಡಿದ ನ್ಯಾಯಪೀಠಇದೇ ಐಎನ್‌ಎಸ್‌ ಮತ್ತು ಭಾರತ್‌ ಜೋಡೊ ಯಾತ್ರೆಯ ಟ್ವಿಟರ್‌ ಖಾತೆಗೆ 21ರವರೆಗೆ ವಿಧಿಸಿದ್ದ ನಿರ್ಬಂಧದ ಆದೇಶವನ್ನು ರದ್ದುಪಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT