ಶುಕ್ರವಾರ, ಮೇ 27, 2022
27 °C

ಭೋವಿ ನಿಗಮ: ನಿರ್ದೇಶಕರ ವಿರುದ್ಧ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಆರ್‌.ಲೀಲಾವತಿ ಅವರ ಸಹಿ ನಕಲು ಮಾಡಿದ ಆರೋಪದ ಮೇಲೆ ನಿಗಮದ ನಿರ್ದೇಶಕ ರವಿಕುಮಾರ್‌ ವಿರುದ್ಧ ಮಹಾಲಕ್ಷ್ಮಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ‍ಪ್ರಕರಣ ದಾಖಲಾಗಿದೆ.

‘ವಿವಿಧ ಜಿಲ್ಲೆಯ ಫಲಾನುಭವಿಗಳಿಗೆ ನಿಗಮದಿಂದ ಒಟ್ಟು ₹1.83 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ನಕಲಿ ಆದೇಶ ಹೊರಡಿಸಲಾಗಿದೆ. ಇದಕ್ಕೆ ನನ್ನ ಸಹಿ ನಕಲು ಮಾಡಲಾಗಿದೆ’ ಎಂದು ಲೀಲಾವತಿ ಅವರು ದೂರು ನೀಡಿದ್ದಾರೆ. ಅದರ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ’‍ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

‘ಇದಕ್ಕಾಗಿ ಇಲಾಖೆಯ ಇ–ಮೇಲ್‌ ಖಾತೆಯನ್ನೂ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದೂ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.