ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೃಷ್ಟಿಯ ಬೆಳಕಾಗಿದ್ದ ಭುಜಂಗ ಶೆಟ್ಟಿ ಪಂಚಭೂತಗಳಲ್ಲಿ ಲೀನ

Published 20 ಮೇ 2023, 23:56 IST
Last Updated 20 ಮೇ 2023, 23:56 IST
ಅಕ್ಷರ ಗಾತ್ರ

ಬೆಂಗಳೂರು: ನಾರಾಯಣ ನೇತ್ರಾಲಯದ ಮುಖ್ಯಸ್ಥ ಹಾಗೂ ಖ್ಯಾತ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ ಅವರ ಅಂತ್ಯಸಂಸ್ಕಾರ ಇಲ್ಲಿನ ಹರಿಶ್ಚಂದ್ರಘಾಟ್ ರುದ್ರಭೂಮಿಯಲ್ಲಿ ಶನಿವಾರ ನಡೆಯಿತು. 

ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಬಸವೇಶ್ವರ ನಗರದ ಅವರ ನಿವಾಸದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಯಿಂದ 10.30ರವರೆಗೆ, 11 ಗಂಟೆಯಿಂದ ಮಧ್ಯಾಹ್ನ 2ರವರೆಗೆ ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್ ಕುಟುಂಬದ ಸದಸ್ಯರು, ಡಾ.ಸಿ.ಎನ್. ಮಂಜುನಾಥ್, ಡಾ. ದೇವಿಪ್ರಸಾದ್ ಶೆಟ್ಟಿ, ಡಾ. ಸುದರ್ಶನ ಬಲ್ಲಾಳ್ ಸೇರಿ ವಿವಿಧ ಆಸ್ಪತ್ರೆಗಳ ವೈದ್ಯರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು ಅಂತಿಮ ದರ್ಶನ ಪಡೆದರು.

ಡಾ. ರಾಜ್‌ಕುಮಾರ್ ನೇತ್ರ ನಿಧಿ ಆರಂಭಿಸಿದ ಡಾ. ಭುಜಂಗಶೆಟ್ಟಿ, ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಲಕ್ಷಾಂತರ ಜನರ ಬಾಳಿಗೆ ದೃಷ್ಟಿಯ ಬೆಳಕು ನೀಡಿದ್ದರು. ಅವರು ತಮ್ಮ ಕಣ್ಣುಗಳ ದಾನದ ಮೂಲಕ ಇಬ್ಬರಿಗೆ ನೆರವಾಗಿದ್ದಾರೆ. 

ಡಾ. ಭುಜಂಗ ಶೆಟ್ಟಿ ನಿಧನದ ಕಾರಣ ರಾಜಾಜಿನಗರದ ನಾರಾಯಣ ನೇತ್ರಾಲಯ ಸೇರಿ ಬನ್ನೇರುಘಟ್ಟ, ಇಂದಿರಾನಗರ ಮತ್ತು ನಾರಾಯಣ ಹೆಲ್ತ್ ಸಿಟಿಯ ಶಾಖೆಗಳಲ್ಲಿ ಶನಿವಾರ ಹೊರ ರೋಗಿಗಳ ಸೇವೆ ಸಂಪೂರ್ಣ ಸ್ಥಗಿತಗೊಂಡಿತ್ತು. ರೋಗಿಗಳಿಗೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಈ ಮೊದಲು ನಿಗದಿಯಾಗಿದ್ದ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT