ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಮಿಕಾ ಕ್ಲಬ್: 25ಕ್ಕೆ ವಿವಾಹ ಆವೃತ್ತಿಯ ವಿಶೇಷ ಕಾರ್ಯಕ್ರಮ

Last Updated 22 ಫೆಬ್ರುವರಿ 2023, 16:23 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ನ ‘ಭೂಮಿಕಾ ಕ್ಲಬ್’ ವೇದಿಕೆ, ಇದೇ 25ರಂದು ಮಧ್ಯಾಹ್ನ 2.30ಕ್ಕೆ ವಿವಾಹ ಆವೃತ್ತಿಯ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

ಮಲಬಾರ್ ಗೋಲ್ಡ್‌ ಆ್ಯಂಡ್ ಡೈಮಂಡ್ಸ್, ಹಟ್ಟಿ ಕಾಫಿ ಹಾಗೂ ಸ್ಟೈಲ್‌ ಸ್ಟ್ರಾಡಾ ಸಹಯೋಗದಲ್ಲಿ, ಅಶೋಕನಗರದಲ್ಲಿರುವ ಸೇಂಟ್ ಜೋಸೆಫ್ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ನಟಿ ಭೂಮಿ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

‘ವಿವಾಹ ಯೋಜನೆ’ಯ ಬಗ್ಗೆ ಗೀತಾ ನಾಯ್ಡು, ‘ವಿವಾಹದ ಸ್ಟೈಲ್‌’ ಬಗ್ಗೆ ಶೈನಿ ಅಲೆಕ್ಸಾಂಡರ್, ‘ಮೇಕಪ್’ ಬಗ್ಗೆ ಸುಷ್ಮಾ ನಾಣಯ್ಯ ಮಾತನಾಡಲಿದ್ದಾರೆ. ಭವಾನಿ ಪ್ರಕಾಶ್ ಅವರ ನೇತೃತ್ವದಲ್ಲಿ ವಿವಾಹಕ್ಕೆ ಸಂಬಂಧಿಸಿದ ಫ್ಯಾಷನ್ ಶೋ ನಡೆಯಲಿದೆ.

ಕಾರ್ಯಕ್ರಮದಲ್ಲಿ ಅಚ್ಚರಿ ಉಡುಗೊರೆ ಗೆಲ್ಲುವ ಅವಕಾಶವೂ ಇರಲಿದೆ. ಹೆಸರು ನೋಂದಾಯಿಸಿದವರಿಗೆ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಎಂದು ಪ್ರಕಟಣೆ ತಿಳಿಸಿದೆ.

ನೋಂದಣಿಗೆ: bit.ly/BhumikaClubWedding

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT