ಬೆಂಗಳೂರು: ಎಸ್.ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ನೀಡುವ ‘ಎಸ್.ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿ’ಗೆ ಸಾಹಿತಿ ಎಸ್.ಆರ್. ರಾಮಸ್ವಾಮಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹1 ಲಕ್ಷ ನಗದು ಒಳಗೊಂಡಿದೆ. ರಾಮಸ್ವಾಮಿ ಅವರು ಸಾಹಿತ್ಯ, ಸಂಸ್ಕೃತಿ, ಸಮಾಜ ಸಂಘಟನೆ, ಪರಿಸರ ಸಂರಕ್ಷಣೆ, ಸ್ವದೇಶಿ ಅಭಿಯಾನ, ಪತ್ರಿಕೋದ್ಯಮ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಇದೇ 18ರಂದು ಸಂಜೆ 4.30ಕ್ಕೆ ಬೆಂಗಳೂರಿನ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಾಹಿತಿ ಎಸ್.ಎಲ್. ಭೈರಪ್ಪ ಅವರು ಉಪಸ್ಥಿತರಿರಲಿದ್ದು, ವಿದ್ವಾಂಸ ಟಿ.ವಿ. ವೆಂಕಟಾಚಲಶಾಸ್ತ್ರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಜಿ.ಎಲ್. ಶೇಖರ್ ತಿಳಿಸಿದ್ದಾರೆ.