ಬುಧವಾರ, ಏಪ್ರಿಲ್ 8, 2020
19 °C

ದೇಶದ್ರೋಹ ಪ್ರಕರಣದಲ್ಲಿ ಸರ್ಕಾರದ ಪಾತ್ರವಿಲ್ಲ: ಸಿ.ಎನ್‌.ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಬೀದರ್‌ನ ಶಾಲೆ ಯೊಂದರ ಶಿಕ್ಷಕಿ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸುವಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಂಡಿಲ್ಲ’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ಪಕ್ಷದ ಕಚೇರಿಯಲ್ಲಿ ಶನಿವಾರ ಸಾರ್ವನಿಕ ಅಹವಾಲು ಆಲಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಸಿದ್ದರಾಮಯ್ಯ ಎನ್‌ಆರ್‌ಸಿ ವಿರೋಧಿಸುತ್ತಿದ್ದಾರೆ. ಆದರೆ, ಅವರ ಆಡಳಿತ ಅವಧಿಯಲ್ಲಿ ಜಾತಿಗಳ ಸಮೀಕ್ಷೆ ನಡೆಸಿ ಸಮಾಜವನ್ನು ಒಡೆಯಲು ಯತ್ನಿಸಿದ್ದರು. ಕಾಂಗ್ರೆಸ್‌ ನಾಯಕರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ‘ ಎಂದರು.

‘ವಿಶ್ವವಿದ್ಯಾಲಯಗಳಲ್ಲಿ ದೇಶದ್ರೋಹ ಕೆಲಸ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.

‘ಬಜೆಟ್‌ ಅಧಿವೇಶನದಲ್ಲಿ ಸಂವಿಧಾನ ಕುರಿತು ಚರ್ಚೆಗೇ ಎರಡು ದಿನ ಮೀಸಲಿಟ್ಟಿದ್ದು, ಉಳಿದ ಅವಧಿಯಲ್ಲಿ ಇತರೆ ವಿಷಯಗಳು ಚರ್ಚೆ ಆಗಲಿವೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು