ಕೆ.ಆರ್.ಪುರ: ಸಮರ್ಪಕವಾಗಿ ಕುಡಿಯುವ ನೀರು ಪೂರೈಸುತ್ತಿಲ್ಲ, ರಸ್ತೆ, ಚರಂಡಿ ವ್ಯವಸ್ಥೆಯೂ ಅವ್ಯವಸ್ಥೆಯಾಗಿದೆ, ಕಸದ ಸಮಸ್ಯೆಯನ್ನು ಸರಿಯಾಗಿ ನಿರ್ವಹಿಸುವಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ವಿಫಲರಾಗಿದ್ದಾರೆ...

ಇವು ಬಿದರಹಳ್ಳಿ ಗ್ರಾಮ ಪಂಚಾಯಿತಿಯಿಂದ ಕಾಡ ಅಗ್ರಹಾರ ಗ್ರಾಮದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಮೊದಲ ಸುತ್ತಿನ ಗ್ರಾಮ ಸಭೆಯಲ್ಲಿ ಶಾಸಕಿ ಮಂಜುಳಾ ಲಿಂಬಾವಳಿ ಅವರಿಗೆ ಸಾರ್ವಜನಿಕರು ಸಲ್ಲಿಸಿದ ದೂರುಗಳು.

‘ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿರುತ್ತದೆ. ಇದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಕೆಲವು ಕಡೆ ಬೀದಿನಾಯಿಗಳ ಕಾಟವೂ ಜಾಸ್ತಿಯಾಗಿದೆ’ ಎಂದು ಗ್ರಾಮಸ್ಥರು ದೂರಿದರು.

‘ಹಸಿ ಮತ್ತು ಒಣ ಕಸ ಸಮರ್ಪಕವಾಗಿ ವಿಲೇವಾರಿ ಮಾಡುತ್ತಿಲ್ಲ. ಕೆಲವರು ಕೆರೆ ಒತ್ತುವರಿ ಮಾಡಿಕೊಂಡು ಬಫರ್ ವಲಯದ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಅವುಗಳಿಗೆ ವಿದ್ಯುತ್, ನೀರು ಮೂಲ ಸೌಕರ್ಯಗಳನ್ನು ಒದಗಿಸಿದ್ದಾರೆ’ ಎಂದು ಗ್ರಾಮಸ್ಥರು ಆರೋಪಿಸಿದರು.

‘ಆದೂರು ಗ್ರಾಮದಲ್ಲಿ 14 ಗುಂಟೆ ಸ್ಮಶಾನ ಜಾಗವಿದೆ. ಆದರೆ ಸ್ಮಶಾನಕ್ಕೆ ಹೋಗಲು ದಾರಿಯಿಲ್ಲ. ಪ್ರಭಾವಿಗಳು ಸ್ಮಶಾನವನ್ನು ಒತ್ತುವರಿ ಮಾಡಿಕೊಂಡು ಬಡಾವಣೆಗಳನ್ನು ನಿರ್ಮಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳತ್ತಿಲ್ಲ’ ಎಂದು ಆದೂರು ಗ್ರಾಮದ ನಿವಾಸಿ ಮಂಜುನಾಥ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ಗ್ರಾಮದಲ್ಲಿ ರಾಜಕಾಲುವೆ ಅಭಿವೃದ್ಧಿ ಮಾಡಿಲ್ಲ. ಇದರಿಂದ ಮಳೆಗಾಲದಲ್ಲಿ ನೀರಿನ ಒತ್ತಡ ಹೆಚ್ಚಾಗಿ ಮನೆಗಳಿಗೆ ನುಗ್ಗುತ್ತದೆ. ಪ್ರತಿ ಗ್ರಾಮಸಭೆಯಲ್ಲೂ ಈ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದ್ದೇವೆ, ಆದರೆ ಬಗೆಹರಿಸಿಲ್ಲ. ಕಾಟಾಚಾರಕ್ಕೆ ಗ್ರಾಮಸಭೆ ನಡೆಸಲಾಗುತ್ತದೆ’ ಎಂದು ಅವರು ದೂರಿದರು.

ಶಾಸಕಿ ಮಂಜುಳಾ ಲಿಂಬಾವಳಿ ಸಾರ್ವಜನಿಕರ ಅಹವಾಲು ಅಲಿಸಿದರು. ಎಲ್ಲಾ ಸಮಸ್ಯೆಗಳಿಗೆ ಆದಷ್ಟು ಬೇಗ ಸೂಕ್ತ ಪರಿಹಾರ ಒದಗಿಸಬೇಕು. ಮತ್ತೆ ಸಾರ್ವಜನಿಕರಿಂದ ದೂರುಗಳು ಪುನರಾವರ್ತನೆ ಆದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಸಹಾಯ ಧನದ ಚೆಕ್, ಬಿದರಹಳ್ಳಿ ಸರ್ಕಾರಿ ಶಾಲೆಗೆ ಕಂಪ್ಯೂಟರ್ ವಿತರಿಸಲಾಯಿತು.

ಈ ಸಂಧರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿ ವಸಂತ್ ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ, ಉಪಾಧ್ಯಕ್ಷ ಅಂಜಿನಮ್ಮ, ಸದಸ್ಯರಾದ ರಾಜೇಶ್, ವರುಣ್, ಪಿಡಿಒ ಲೋಹಿತ್ ಮತ್ತಿತರರು ಇದ್ದರು.

’ಬಡವರಿಗೆ ನಿವೇಶನ ನೀಡಿ’

ಕಾಡ ಅಗ್ರಹಾರ ಗ್ರಾಮದಲ್ಲಿ ಕೆರೆ ದಡ ಪ್ರಮುಖ ವೃತ್ತ ಮುಖ್ಯ ರಸ್ತೆಯಲ್ಲಿ ಕಸ ಸುರಿಯುತ್ತಿದ್ದಾರೆ ಇದಕ್ಕೆ ಕಡಿವಾಣ ಹಾಕಬೇಕು. ಈ ಗ್ರಾಮದಲ್ಲಿ ದಲಿತ ಹಿಂದುಳಿದ ಸಮುದಾಯದ ಹೆಚ್ಚಿನ ಜನರಿದ್ದು ಇವರಿಗೆ ನಿವೇಶನಗಳಿಲ್ಲ. ಗ್ರಾಮದಲ್ಲಿ ಸರ್ವೆ ನಂಬರ್ 34 ರಲ್ಲಿ ನಾಲ್ಕು ಎಕರೆ ಸರ್ಕಾರಿ ಗೋಮಾಳವಿದೆ. ಇದನ್ನು ನಿವೇಶನವಿಲ್ಲದ ಬಡವರಿಗೆ ಹಂಚಿಕೆ ಮಾಡಬೇಕು ಎಂದು ಗ್ರಾಮದ ನಿವಾಸಿ ಶಿವಕುಮಾರ್ ಹೇಳಿದರು. ಗ್ರಾಮಸಭೆ 12.30ಕ್ಕೆ ಆರಂಭಗೊಂಡು 1.30ಗಂಟೆಗೆ ಮುಕ್ತಾಯಗೊಳಿಸಿದರು. ಗ್ರಾಮ ಸಭೆಯನ್ನು ಒಂದು ಗಂಟೆ ಅವಧಿಗೆ ಸೀಮಿತಗೊಳಿಸಿದ್ದು ಗ್ರಾಮಸ್ಥರ ಅಕ್ರೋಶಕ್ಕೆ ಕಾರಣವಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.