ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಮಾಹಿತಿಗೆ ‘ಬಿಗ್‌ ಹಾತ್‌’ ಆ್ಯಪ್ ಬಿಡುಗಡೆ

Last Updated 20 ಜುಲೈ 2022, 19:29 IST
ಅಕ್ಷರ ಗಾತ್ರ

ಬೆಂಗಳೂರು: ಕೃಷಿಗೆ ಸಂಬಂಧಿಸಿದ ಮಾಹಿತಿಗಳನ್ನು ಒದಗಿಸುವ ‘ಬಿಗ್‌ ಹಾತ್‌’ ಆ್ಯಪ್‌ ಅನ್ನು ಬುಧವಾರ ಬಿಡುಗಡೆಗೊಳಿಸಲಾಯಿತು.

ಸರ್ಕಾರ ಮತ್ತು ಖಾಸಗಿ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ಕೃಷಿ ಮತ್ತು ರೈತರಿಗೆ ಸಂಬಂಧಿಸಿದ ಹೊಸ ಆವಿಷ್ಕಾರಗಳು ಹೆಚ್ಚಾಗಬೇಕು. ಕೃಷಿ ಕ್ಷೇತ್ರದ ಡಿಜಿಟಲೀಕರಣಕ್ಕೆ ಹೆಚ್ಚು ಒತ್ತು ನೀಡಬೇಕು. ರಾಜ್ಯದಲ್ಲಿ 65 ಲಕ್ಷ ರೈತರು ಬೆಳೆ ಸಮೀಕ್ಷೆಯನ್ನು ಮೊಬೈಲ್‌ ಮೂಲಕ ಮಾಡುತ್ತಿದ್ದಾರೆ ಎಂದು ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಪಿ. ಕಳಸದ ಮಾಹಿತಿ ನೀಡಿದರು. ಸಂಸ್ಥೆಯ ಕಾರ್ಯ ನಿರ್ವಾಹಕ ಅಧಿಕಾರಿ ಸತೀಶ್ ನೂಕಲಾ, ಆ್ಯಪ್‌ ರೈತರಿಗೆ ಆರೋಗ್ಯಕರ ಡಿಜಿಟಲ್‌ ಪರಿಸರ ವ್ಯವಸ್ಥೆ ಒದಗಿಸುವ ಉದ್ದೇಶ ಹೊಂದಿದೆ. ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ಕನ್ನಡದಲ್ಲೇ ಈ ಆ್ಯಪ್‌ ಅಭಿವೃದ್ಧಿಗೊಳಿಸಲಾಗಿದೆ. ಒಟ್ಟು 61 ಬೆಳೆಗಳ ಕುರಿತು ಸಂಪೂರ್ಣ ಮಾಹಿತಿ ಒದಗಿಸಲಾಗಿದೆ ಎಂದರು.

ಕಿಸಾನ್‌ ಬಜಾರ್‌ ಮೂಲಕ ರೈತರು ಬೆಳೆದ ವಸ್ತುಗಳನ್ನು ಆನ್‌ ಲೈನ್‌ನಲ್ಲಿ ಮಾರಾಟ ಮಾಡುವ ವೇದಿಕೆ ಕಲ್ಪಿಸಲಾಗಿದೆ. ಅಗ್ರಿ ಸ್ಟೋರ್‌, ಕೀಟನಾಶಕ, ಗೊಬ್ಬರ, ಉತ್ತಮ ಗುಣ ಮಟ್ಟದ ಬಿತ್ತನೆ ಬೀಜಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT