ಬೆಂಗಳೂರು: ರಸ್ತೆ ಬದಿಯ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಆರ್.ಟಿ.ನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾಕ್ಸ್ಟೌನ್ನ ಐದನೇ ಕ್ರಾಸ್ ನಿವಾಸಿ ಕ್ರಿಸ್ಟೋಫರ್ ವಿಜಯ (50) ಮೃತ ವ್ಯಕ್ತಿ. ಶನಿವಾರ ರಾತ್ರಿ ಮೇಖ್ರಿ ಸರ್ಕಲ್ ಕಡೆಯಿಂದ ಜಯಮಹಲ್ ಮುಖ್ಯ ರಸ್ತೆ ಮಾರ್ಗವಾಗಿ ಟಿ.ವಿ ಟವರ್ ಬಳಿ ಬೈಕ್ನಲ್ಲಿ ಚಲಿಸುತ್ತಿದ್ದ ವೇಳೆ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದಾಗಿ ತೀವ್ರವಾಗಿ ಗಾಯಗೊಂಡರು.

ಸಾರ್ವಜನಿಕರ ಸಹಾಯದಿಂದ ಆಂಬುಲೆನ್ಸ್ ಮೂಲಕ ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಯಿತು. ಪರೀಕ್ಷಿಸಿದ ವೈದ್ಯರು ಮಾರ್ಗಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಆರ್.ಟಿ.ನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅತಿ ವೇಗ ಮತ್ತು ಅಜಾಗರೂಕತೆ ಕಾರಣ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.