ಬೆಂಗಳೂರು: ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಶುಕ್ರವಾರ ಬಳಿ ನಡೆದಿದೆ.

ದಯಾನಂದ ಸಾಗರ್ ಕಾಲೇಜಿನ ಪ್ರಥಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಾದ ಮನೋಜ್ (17) ಮತ್ತು ಹೃತ್ವಿಕ್ (17) ಮೃತರು.

ಈ ಇಬ್ಬರೂ ಕಾಲೇಜು ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಬಳಿಕ ಮರಕ್ಕೆ ಡಿಕ್ಕಿಯಾಗಿದೆ. ತೀವ್ರವಾಗಿ ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು. ಸವಾರ ಮನೋಜ್ ಹಾಗೂ ಹಿಂಬದಿ ಸವಾರ ಇಬ್ಬರೂ ಚಿಕಿತ್ಸೆಗೆ ಸ್ಪಂದಿಸಲಿಲ್ಲ.

ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.