ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಬೈಕ್ ಮೆಕ್ಯಾನಿಕ್ ಕೊಲೆ

Published 10 ಮೇ 2024, 15:44 IST
Last Updated 10 ಮೇ 2024, 15:44 IST
ಅಕ್ಷರ ಗಾತ್ರ

ಬೆಂಗಳೂರು: ಬೈಕ್ ಮೆಕ್ಯಾನಿಕ್ ದಿಲೀಪ್ (34) ಎಂಬುವವರನ್ನು ಕೊಲೆ ಮಾಡಲಾಗಿದ್ದು, ಪರಿಚಯಸ್ಥರೇ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

‘ಓಕಳಿಪುರ ಬಳಿಯ ರೈಲ್ವೆ ಸೇತುವೆ ಸಮೀಪದಲ್ಲಿ ಮೇ 1ರಂದು ಮೃತದೇಹ ಪತ್ತೆಯಾಗಿತ್ತು. ಆದರೆ, ಗುರುತು ಪತ್ತೆಯಾಗಿರಲಿಲ್ಲ. ಮೃತದೇಹದ ಫೋಟೊಗಳನ್ನು ನಗರ ಹಾಗೂ ಹೊರ ಜಿಲ್ಲೆಗಳ ಪೊಲೀಸ್ ಠಾಣೆಗಳಿಗೆ ಕಳುಹಿಸಲಾಗಿತ್ತು. ದಿಲೀಪ್‌ ಅವರದ್ದೇ ಮೃತದೇಹ ಎಂಬುದನ್ನು ಸಂಬಂಧಿಕರು ಗುರುತು ಹಿಡಿದಿದ್ದಾರೆ’ ಎಂದು ಶ್ರೀರಾಮಪುರ ಠಾಣೆ ಪೊಲೀಸರು ಹೇಳಿದರು.

‘ಎಲ್‌.ಎನ್‌.ಪುರದ ದಿಲೀಪ್ ಅವರನ್ನು ಕೊಲೆ ಮಾಡಿ, ಮೃತದೇಹವನ್ನು ಹಳಿ ಬಳಿ ಎಸೆದು ಹೋಗಿರುವ ಅನುಮಾನವಿದೆ. ಆರೋಪಿಗಳ ಪತ್ತೆಗಾಗಿ, ಹಳಿ ಸಮೀಪದ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯ ಪರಿಶೀಲಿಸಲಾಗುತ್ತಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT