ಗುರುವಾರ , ಅಕ್ಟೋಬರ್ 6, 2022
22 °C

ನಿಯಂತ್ರಣ ತಪ್ಪಿದ ಬೈಕ್‌: ಹಿಂಬದಿ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಚ್‌ಎಸ್‌ಆರ್‌ ಲೇಔಟ್‌ನ ಹೊರವರ್ತುಲ ರಸ್ತೆಯಲ್ಲಿ ಬುಧವಾರ ಮುಂಜಾನೆ ಬೈಕ್‌ ಒಂದು ರಸ್ತೆಯ ಉಬ್ಬು ದಾಟುವಾಗ ಆಯತಪ್ಪಿ ಬಿದ್ದ ಪರಿಣಾಮ ಹಿಂಬದಿ ಸವಾರ ಶ್ರೀಪತಿರಾವ್‌ (57) ಎಂಬುವರು ಮೃತಪಟ್ಟಿದ್ದಾರೆ. ಬೈಕ್‌ ಸವಾರ ಕಾರ್ತಿಕ್‌ (25) ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡಿದ್ದ ಶ್ರೀಪತಿರಾವ್‌ ಅವರನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಸವಾರನ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣ. ತಡರಾತ್ರಿ ಮಾರುಕಟ್ಟೆ ಪ್ರದೇಶದಲ್ಲಿ ಊಟಕ್ಕೆ ಬೈಕ್‌ನಲ್ಲಿ ತೆರಳುವಾಗ ಈ ಅವಘಡ ಸಂಭವಿಸಿದೆ’ ಎಂದು ನಾಗೇಶ್‌ ಎಂಬುವವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು