ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಅಪಘಾತ: ಬೈಕ್‌ ಸವಾರ ಸಾವು

Published 15 ಜೂನ್ 2024, 15:47 IST
Last Updated 15 ಜೂನ್ 2024, 15:47 IST
ಅಕ್ಷರ ಗಾತ್ರ

ಬೆಂಗಳೂರು: ಹೆಣ್ಣೂರು ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಹೆಗಡೆ ನಗರದ ಮುಖ್ಯರಸ್ತೆಯಲ್ಲಿ ಶನಿವಾರ ರಾತ್ರಿ 1.30ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ನಾಜೀಶ್‌ ಸಮೀಮ್‌ ಸೈಯದ್‌ (23) ಮೃತಪಟ್ಟಿದ್ದಾರೆ 

ಶುಕ್ರವಾರ ರಾತ್ರಿ ಕಾರ್ತೀಕ್‌ ಹಾಗೂ ನಾಜೀಶ್‌ ಸಮೀಮ್‌ ಸೈಯದ್‌ ಅವರು ಹೋಟೆಲ್‌ನಲ್ಲಿ ಊಟ ಮಾಡಿ ಮನೆಗೆ ತೆರಳುತ್ತಿದ್ದರು.  ಹೆಗಡೆನಗರ ಮುಖ್ಯರಸ್ತೆಯ ಆರ್.ಆರ್. ಸಿಗ್ನೇಚರ್‌ ಅಪಾರ್ಟ್‌ಮೆಂಟ್ ಎದುರು ಬ್ಯಾರಿಕೇಡ್‌ ಹಾಗೂ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೈಕ್‌ ಚಾಲನೆ ಮಾಡುತ್ತಿದ್ದ ನಾಜೀಶ್‌ ಸಮೀಮ್‌ ಸೈಯದ್‌ ಸ್ಥಳದಲ್ಲೇ ಮೃತಪಟ್ಟರು. ಕಾರ್ತೀಕ್‌ಗೆ ಗಂಭೀರ ಸ್ವರೂಪದ ಗಾಯಗಳಾಗಿವೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT