‘ರಾತ್ರಿ 9.20ರ ಸುಮಾರಿಗೆ ಹಳೆ ಮದ್ರಾಸ್ ರಸ್ತೆಯ ಐಟಿಐ ಗೇಟ್ ಮುಂಭಾಗದಲ್ಲಿ ಬುಲೆಟ್ ಬೈಕ್‌ನಲ್ಲಿ ಸುಪ್ರಿತ್ ತೆರಳುತ್ತಿದ್ದರು. ಅದೇ ವೇಳೆಯಲ್ಲಿ ಕೆ.ಆರ್.ಮಾರುಕಟ್ಟೆಯಿಂದ ಹೊಸಕೋಟೆಯತ್ತ ಬಸ್ ಹೊರಟಿತ್ತು. ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮುಂದೆ ಚಲಿಸುತ್ತಿದ್ದ ಲಾರಿಗೆ ಬೈಕ್ ಅಪ್ಪಳಿಸಿದೆ. ಸವಾರ ಬಸ್ ಮತ್ತು ಲಾರಿ ಮಧ್ಯೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ’ ಎಂದು ಸಂಚಾರ ಪೊಲೀಸರು ಹೇಳಿದರು.