ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಬೈಕ್‌ ಸವಾರ ಸಾವು

Last Updated 30 ಜನವರಿ 2023, 19:10 IST
ಅಕ್ಷರ ಗಾತ್ರ

ಬೆಂಗಳೂರು: ಸ್ಯಾಂಕಿ ರಸ್ತೆಯಲ್ಲಿ ಬೈಕೊಂದು ಉರುಳಿಬಿದ್ದು ಅಪಘಾತ ಸಂಭವಿಸಿದ್ದು, ಸವಾರ ರಾಜೇಶ್ ಆಚಾರ್ಯ (28) ಮೃತಪಟ್ಟಿದ್ದಾರೆ.

‘ಯಶವಂತಪುರದ ನಿವಾಸಿ ರಾಜೇಶ್, ಮಣಿಪಾಲ್ ಆಸ್ಪತ್ರೆಯಲ್ಲಿ ಎ.ಸಿ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದರು. ಸ್ನೇಹಿತ ಪರುಶುರಾಮ್ ಹಟ್ಟಿ ಜೊತೆ ಭಾನುವಾರ ರಾತ್ರಿ ವಿಧಾನಸೌಧ ವೀಕ್ಷಿಸಲು ಬೈಕ್‌ನಲ್ಲಿ ಹೊರಟಿದ್ದ ವೇಳೆ ಅವಘಡ ಸಂಭವಿಸಿದೆ’ ಎಂದು ಹೈಗ್ರೌಂಡ್ಸ್ ಸಂಚಾರ ಪೊಲೀಸರು ಹೇಳಿದರು.

‘ರಾಜೇಶ್ ಬೈಕ್ ಚಲಾಯಿಸುತ್ತಿದ್ದರು. ಹಿಂಬದಿಯಲ್ಲಿ ಪರುಶುರಾಮ್ ಕುಳಿತಿದ್ದರು. ಬೈಕ್‌ ಉರುಳಿದ್ದರಿಂದ ತೀವ್ರ ಗಾಯಗೊಂಡಿದ್ದ ಇಬ್ಬರನ್ನೂ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ರಾಜೇಶ್ ಮಾರ್ಗಮಧ್ಯೆಯೇ ಮೃತಪಟ್ಟಿದ್ದರು. ಪರಶುರಾಮ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದ ಆರೋಪದಡಿ ರಾಜೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳ
ಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT