ದಾಖಲೆ ಇಲ್ಲದ 217 ದ್ವಿಚಕ್ರ ವಾಹನ ಜಪ್ತಿ
ಬೆಂಗಳೂರು: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಭೇದಿಸಲು ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪಶ್ಚಿಮ ವಿಭಾಗದ ಪೊಲೀಸರು, ದಾಖಲೆ ಇಲ್ಲದ 217 ವಾಹನಗಳನ್ನು ಶುಕ್ರವಾರ ಜಪ್ತಿ ಮಾಡಿದ್ದಾರೆ.
‘ಬಸವೇಶ್ವರನಗರ, ವಿಜಯನಗರ, ಕಾಮಾಕ್ಷಿಪಾಳ್ಯ ಸೇರಿದಂತೆ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ 54 ನಾಕಾಬಂದಿಗಳನ್ನು ನಿರ್ಮಿಸಲಾಗಿತ್ತು. ಪ್ರತಿಯೊಂದು ದ್ವಿಚಕ್ರ ವಾಹನವನ್ನು ತಡೆದು ದಾಖಲೆಗಳ ಪರಿಶೀಲನೆ ನಡೆಸಲಾಯಿತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
‘ಸೂಕ್ತ ದಾಖಲೆ ಹಾಜರುಪಡಿಸದ ಹಾಗೂ ಅನುಮಾನಾಸ್ಪದ 217 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿ, ಆಯಾ ಠಾಣೆಗಳ ವ್ಯಾಪ್ತಿಯಲ್ಲಿ ನಿಲ್ಲಿಸಲಾಗಿದೆ. ದಾಖಲೆ ಹಾಜರುಪಡಿಸಿ ವಾಹನ ಪಡೆಯುವಂತೆ ಮಾಲೀಕರಿಗೆ ಸೂಚಿಸಲಾಗಿದೆ. ದಾಖಲೆ ಹಾಜರುಪಡಿಸದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು‘ ಎಂದೂ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.