ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಲಕನಿಂದ ವ್ಹೀಲಿಂಗ್; ವಾಹನ ಜಪ್ತಿ

Published 29 ಮೇ 2024, 16:10 IST
Last Updated 29 ಮೇ 2024, 16:10 IST
ಅಕ್ಷರ ಗಾತ್ರ

ಬೆಂಗಳೂರು: ಕೆ.ಜಿ.ಹಳ್ಳಿ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವ್ಹೀಲಿಂಗ್‌ ಮಾಡುವವರನ್ನು ಪತ್ತೆ ಹಚ್ಚಲು ಕೈಗೊಂಡ ವಿಶೇಷ ಕಾರ್ಯಾಚರಣೆಯಲ್ಲಿ ಓರ್ವ  ಬಾಲಕನನ್ನು ಪತ್ತೆಮಾಡಿದ್ದು, ವಾಹನವನ್ನು ಜಪ್ತಿಮಾಡಲಾಗಿದೆ.

ಬುಧವಾರ ಠಾಣಾ ಸಿಬ್ಬಂದಿ ಗಸ್ತಿನಲ್ಲಿರುವಾಗ ಹೆಚ್.ಬಿ.ಆರ್. ಲೇಔಟ್ ಮುಖ್ಯರಸ್ತೆಯಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದ ಬಾಲಕನ ದ್ವಿ–ಚಕ್ರ ವಾಹನವನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

‘ವಿಚಾರಣೆಯಲ್ಲಿ ಸವಾರ ಅಪ್ರಾಪ್ತ ವಯಸ್ಕನೆಂದು ತಿಳಿದು ಬಂದಿದ್ದು, ಸಂಚಾರ ಪೊಲೀಸರು ಸವಾರನ ಪೋಷಕರು/ ವಾಹನ ಮಾಲೀಕರ ವಿರುಧ್ಧ ಪ್ರಥಮ ವರ್ತಮಾನ ವರದಿ (ಎಫ್.ಐ.ಆರ್) ದಾಖಲಿಸಿಕೊಂಡಿದ್ದಾರೆ. ವಾಹನದಲ್ಲಿ ಡ್ಯಾಗರ್ ಸಿಕ್ಕಿದ್ದು, ಮುಂದಿನ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಡಿ.ಜೆ.ಹಳ್ಳಿ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್‌ ಠಾಣೆಯ ವಶಕ್ಕೆ ನೀಡಲಾಗಿದೆ‘ ಎಂದು ಪ್ರಕಟಣೆಯಲ್ಲಿ ಉಪ ಪೊಲೀಸ್‌ ಆಯುಕ್ತ ಕೆ.ವಂಶಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT