ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಹ್ಯಾಂಡಲ್ ಲಾಕ್ ಮುರಿದು ವಾಹನ ಕಳ್ಳತನ

Published 4 ಮೇ 2024, 15:08 IST
Last Updated 4 ಮೇ 2024, 15:08 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಸ್ಥಳ ಹಾಗೂ ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿ ಎ.ಮುಬಾರಕ್‌ನನ್ನು (25) ಚಾಮರಾಜಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಆರ್.ಕೆ.ಹೆಗಡೆ ನಗರದ ಮುಬಾರಕ್, ಅಪರಾಧ ಹಿನ್ನೆಲೆಯುಳ್ಳವ. ಸಹಚರನ ಜೊತೆ ಸೇರಿ ಕೃತ್ಯ ಎಸಗುತ್ತಿದ್ದ. ಈತನಿಂದ ₹ 2.50 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಸಚಹರ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.

‘ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ವಾಹನ ಕದ್ದೊಯ್ದು ನಿರ್ಜನ ಪ್ರದೇಶದಲ್ಲಿ ನಿಲ್ಲಿಸುತ್ತಿದ್ದ. ಸೆಕೆಂಡ್ ಹ್ಯಾಂಡ್ ವಾಹನವೆಂದು ಹೇಳಿ ಬೇರೆಯವರಿಗೆ ಮಾರುತ್ತಿದ್ದ. ದಾಖಲೆ ಕೇಳಿದಾಗ, ಕೆಲ ದಿನ ಬಿಟ್ಟು ಕೊಡುವುದಾಗಿ ಹೇಳುತ್ತಿದ್ದ.’

‘ಚಾಮರಾಜಪೇಟೆ, ಕಲಾಸಿಪಾಳ್ಯ, ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಹಾಗೂ ಗಿರಿನಗರ ಠಾಣೆ ವ್ಯಾಪ್ತಿಯಲ್ಲಿ ಈತ ಕಳವು ಮಾಡಿರುವುದು ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT