ಶುಕ್ರವಾರ, ಮಾರ್ಚ್ 31, 2023
33 °C

ಬೈಕ್–ಟ್ಯಾಂಕರ್ ಡಿಕ್ಕಿ: ಸಿನಿಮಾ ನಿರ್ದೇಶಕನ ಪುತ್ರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೈಕ್‌ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಿನಿಮಾ ನಿರ್ದೇಶಕರೊಬ್ಬರ ಪುತ್ರ ಮೃತಪಟ್ಟಿರುವ ಘಟನೆ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಮಯೂರ್ (20) ಮೃತಪಟ್ಟ ಬೈಕ್‌ ಸವಾರ. ಇವರು ನಟ ಹಾಗೂ ನಿರ್ದೇಶಕ ಸೂರ್ಯೋದಯ ಪೆರಂಪಳ್ಳಿ ಅವರ ಪುತ್ರ ಎನ್ನಲಾಗಿದೆ.

ಸ್ನೇಹಿತನ ಕೆಟಿಎಂ ಬೈಕ್‌ ಪಡೆದಿದ್ದ ಮಯೂರ್, ನ್ಯೂಲಿಂಕ್ ರಸ್ತೆಯಲ್ಲಿ ವೇಗವಾಗಿ ಚಾಲನೆ ಮಾಡುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದ್ದ ಮಯೂರ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

‘ಮಯೂರ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಯಿತು. ಘಟನೆ ಸಂಬಂಧ ಟ್ಯಾಂಕರ್ ಚಾಲಕ ಮಣಿ‌ ಎಂಬಾತನನ್ನು ವಶಕ್ಕೆ ‍ಪಡೆಯಲಾಗಿದ್ದು, ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ಹೇಳಿದರು. 

ಮೃತರ ತಂದೆ ಸೂರ್ಯೋದಯ ಅವರು ‘ದೇಯಿ ಬೈದೆತಿ’ ಎಂಬ ತುಳು ಹಾಗೂ ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು