ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿಚಕ್ರ ವಾಹನ ಕಳ್ಳತನ: ಆರೋಪಿ ಬಂಧನ

Published 8 ಅಕ್ಟೋಬರ್ 2023, 16:08 IST
Last Updated 8 ಅಕ್ಟೋಬರ್ 2023, 16:08 IST
ಅಕ್ಷರ ಗಾತ್ರ

ಬೆಂಗಳೂರು: ರಸ್ತೆಬದಿಯಲ್ಲಿ ಸಾರ್ವಜನಿಕರು ನಿಲುಗಡೆ ಮಾಡುತ್ತಿದ್ದ ದ್ವಿಚಕ್ರ ವಾಹನಗಳನ್ನು ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ರಾಜರಾಜೇಶ್ವರಿ ನಗರದ ಚನ್ನಸಂದ್ರಲೇಔಟ್‌ ನಿವಾಸಿ ಮಂಜುನಾಥ್‌ ಅಲಿಯಾಸ್‌ ಮಂಜು ಬಂಧಿತ ಆರೋಪಿ.

ಕೆಂಗೇರಿಯ ಕೋಟೆ ಬೀದಿಯ ಮಾರಮ್ಮ ದೇವಸ್ಥಾನದ ಬಳಿ ನಿಲುಗಡೆ ಮಾಡಿದ್ದ ಬೈಕ್‌ ಕಳ್ಳತನವಾಗಿದೆ ಎಂದು ನಾರಾಯಣ ಮೂರ್ತಿ ಎಂಬುವರು ದೂರು ನೀಡಿದ್ದರು. ದೂರು ಆಧರಿಸಿ, ತನಿಖೆ ಕೈಗೊಂಡಾಗ ಆರೋಪಿ ಮಂಜು ಸರಣಿ ಕಳ್ಳತನ ನಡೆಸಿರುವುದು ಗೊತ್ತಾಗಿದೆ.

‘ಆರೋಪಿಯಿಂದ ₹1.14 ಲಕ್ಷ ಮೌಲ್ಯದ ಮೂರು ದ್ವಿಚಕ್ರ ವಾಹನ ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT