ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11 ದ್ವಿಚಕ್ರ ವಾಹನ ಕದ್ದಿದ್ದ ಆರೋಪಿ ಬಂಧನ

Last Updated 11 ಜೂನ್ 2022, 15:41 IST
ಅಕ್ಷರ ಗಾತ್ರ

ಬೆಂಗಳೂರು: ಮನೆಗಳ ಮುಂದೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನ ಕದಿಯುತ್ತಿದ್ದ ಆರೋಪಿ ಮುಸ್ತಾನ್‌ನನ್ನು ಕೆ.ಪಿ. ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಠಾಣೆ ವ್ಯಾಪ್ತಿಯ ಮನೆಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಮೇ 22ರಂದು ಕಳ್ಳತನ ಮಾಡಲಾಗಿತ್ತು. ಈ ಪ್ರಕರಣದ ತನಿಖೆ ಕೈಗೊಂಡಾಗ, ಮುಸ್ತಾನ್ ಸಿಕ್ಕಿಬಿದ್ದ. ಈತನಿಂದ ₹ 5 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ವಿಜಯನಗರ, ಜಗಜೀವನ್‌ರಾಮ್ ನಗರ, ಕೆ.ಜಿ.ಹಳ್ಳಿ, ಹೆಣ್ಣೂರು, ರಾಮಮೂರ್ತಿನಗರ, ವೈಟ್‌ಫೀಲ್ಡ್, ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯಲ್ಲೂ ಆರೋಪಿ ಕೃತ್ಯ ಎಸಗಿರುವುದು ಗೊತ್ತಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT