ಶನಿವಾರ, ಅಕ್ಟೋಬರ್ 16, 2021
21 °C

ಬೆಂಗಳೂರು: ದ್ವಿಚಕ್ರ ವಾಹನ ಕದಿಯುತ್ತಿದ್ದ ಮೆಕ್ಯಾನಿಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಹಲವೆಡೆ ದ್ವಿಚಕ್ರ ವಾಹನಗಳನ್ನು ಕದ್ದಿದ್ದ ಆರೋಪದಡಿ ರಹಮತ್ ಅಲಿ ಎಂಬಾತನನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

‘ಆರೋಪಿ ರಹಮತ್, ದ್ವಿಚಕ್ರ ವಾಹನಗಳ ಮೆಕ್ಯಾನಿಕ್ ಆಗಿದ್ದ. ಲಾಕ್‌ ಮುರಿದು ವಾಹನಗಳನ್ನು ಕದಿಯುತ್ತಿದ್ದ. ಆತನಿಂದ ₹ 2.80 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಕೆಂಗೇರಿ ಉಪನಗರದ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಆರೋಪಿ ಕಳವು ಮಾಡಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯ ಹಾಗೂ ಇತರೆ ಸುಳಿವು ಆಧರಿಸಿ ಆರೋಪಿಯನ್ನು ಪತ್ತೆ ಮಾಡಲಾಯಿತು.’

‘ಅಶೋಕನಗರ, ಕೋರಮಂಗಲ ಹಾಗೂ ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲೂ ಆರೋಪಿ ಕೃತ್ಯ ಎಸಗಿದ್ದ. ಈತನ ವಿರುದ್ಧ ನಂದಿನಿ ಲೇಔಟ್ ಠಾಣೆಯಲ್ಲೂ ಸುಲಿಗೆಗೆ ಯತ್ನ ಪ್ರಕರಣ ದಾಖಲಾಗಿತ್ತು’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು