ಬೆಂಗಳೂರು: ಮನೆಗಳ ಮುಂದೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನ ಕದಿಯುತ್ತಿದ್ದ ಆರೋಪಿ ಮುಸ್ತಾನ್ನನ್ನು ಕೆ.ಪಿ. ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಠಾಣೆ ವ್ಯಾಪ್ತಿಯ ಮನೆಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಮೇ 22ರಂದು ಕಳ್ಳತನ ಮಾಡಲಾಗಿತ್ತು. ಈ ಪ್ರಕರಣದ ತನಿಖೆ ಕೈಗೊಂಡಾಗ, ಮುಸ್ತಾನ್ ಸಿಕ್ಕಿಬಿದ್ದ. ಈತನಿಂದ ₹ 5 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ವಿಜಯನಗರ, ಜಗಜೀವನ್ರಾಮ್ ನಗರ, ಕೆ.ಜಿ.ಹಳ್ಳಿ, ಹೆಣ್ಣೂರು, ರಾಮಮೂರ್ತಿನಗರ, ವೈಟ್ಫೀಲ್ಡ್, ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯಲ್ಲೂ ಆರೋಪಿ ಕೃತ್ಯ ಎಸಗಿರುವುದು ಗೊತ್ತಾಗಿದೆ’ ಎಂದೂ ತಿಳಿಸಿದರು.