ಗುರುವಾರ , ಅಕ್ಟೋಬರ್ 22, 2020
22 °C

ಶೋಕಿಗಾಗಿ ಬೈಕ್ ಕಳ್ಳತನ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಾಲಿ ರೈಡ್‍ಗಾಗಿ ಬೈಕ್‍ಗಳನ್ನು ಕದಿಯುತ್ತಿದ್ದ ಆರೋಪಿಯನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ. ಆತನ ಬಳಿಯಿದ್ದ ಆರು ಬೈಕ್‍ಗಳನ್ನು ವಶಕ್ಕೆ ಪಡೆದಿದ್ದಾರೆ.

ಭಾರತಿನಗರದ ನಿವಾಸಿ ಸೈಯದ್ ನಾಸಿರ್ ಬಂಧಿತ ಆರೋಪಿ. ನೈಟ್ ರೈಡ್, ಜಾಲಿ ರೈಡ್‍ಗೆಂದೇ ಶೋಕಿ ಮಾಡಲು ಈತ ದುಬಾರಿ ಬೈಕ್‍ಗಳನ್ನು ಕದಿಯುತ್ತಿದ್ದ ಎನ್ನಲಾಗಿದೆ.

ಬೈಕ್ ಕಳವು ಪ್ರಕರಣದಲ್ಲಿ ನಾಸಿರ್‌ನನ್ನು ಈ ಹಿಂದೆಯೂ ಬಂಧಿಸಲಾಗಿತ್ತು. ಜೈಲಿನಿಂದ ಹೊರಬಂದ ಮೇಲೆ ಮತ್ತೆ ಬೈಕ್ ಕಳ್ಳತನ ಮುಂದುವರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.