ಬುಧವಾರ, ಆಗಸ್ಟ್ 10, 2022
25 °C

ದುಶ್ಚಟಗಳಿಗೆ ಹಣ ಹೊಂದಿಸಲು ಕಳ್ಳತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಾರ್ವಜನಿಕ ಸ್ಥಳ ಹಾಗೂ ಮನೆಗಳ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪದಡಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

‘ಕೀರ್ತಿ, ಸಂಜಯ್ ಹಾಗೂ ದರ್ಶನ್ ಬಂಧಿತರು. ಇವರಿಂದ ₹ 4 ಲಕ್ಷ ಮೌಲ್ಯದ 10 ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮೂವರೂ ಆರೋಪಿಗಳು ಸ್ನೇಹಿತರು. ದುಶ್ಚಟಗಳಿಗೆ ಹಣ ಹೊಂದಿಸಲು ಕಳ್ಳತನಕ್ಕೆ ಇಳಿದಿದ್ದರು. ನಗರದಲ್ಲಿ ಸಂಚರಿಸುತ್ತಿದ್ದ ಇವರು, ಲಾಕ್ ಮುರಿದು ದ್ವಿಚಕ್ರ ವಾಹನ ಕದಿಯುತ್ತಿದ್ದರು. ಅವುಗಳನ್ನು ಮಾರಾಟ ಮಾಡಿ, ಬಂದ ಹಣವನ್ನು ಹಂಚಿಕೊಳ್ಳುತ್ತಿದ್ದರು’ ಎಂದು ತಿಳಿಸಿದರು.

‘ಕೆಂಗೇರಿ, ರಾಜಗೋಪಾಲನಗರ ಸೇರಿ ವಿವಿಧ ಠಾಣೆಗಳ ವ್ಯಾಪ್ತಿಯಲ್ಲೂ ಆರೋಪಿಗಳು ಕೃತ್ಯ ಎಸಗಿದ್ದ ಸಂಗತಿ ತನಿಖೆಯಿಂದ ಗೊತ್ತಾಗಿದೆ’ ಎಂದೂ ಹೇಳಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು