ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕದ್ದ ವಾಹನದಲ್ಲೇ ಸುತ್ತಾಡಿ ಸರಗಳವು ಮಾಡುತ್ತಿದ್ದ ಇಬ್ಬರ ಬಂಧನ

Last Updated 30 ಸೆಪ್ಟೆಂಬರ್ 2022, 2:49 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿಚಕ್ರ ವಾಹನ ಕದ್ದು, ಅದರಲ್ಲೇ ನಗರದಲ್ಲಿ ಸುತ್ತಾಡಿ ಸರಗಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಅಮೃತಹಳ್ಳಿಯ ಮೊಹಮ್ಮದ್ ಸಲ್ಮಾನ್ (23) ಹಾಗೂ ಯಲಹಂಕದ ಜಿಶಾನ್ ಖಾನ್ (25) ಬಂಧಿತರು.

‘ಕನ್ನಮಂಗಲ ಗೇಟ್‌ ಬಳಿಯ ರಸ್ತೆಯಲ್ಲಿ ಸೆ. 10ರಂದು ಹೊರಟಿದ್ದ ಮಹಿಳೆಯೊಬ್ಬರನ್ನು ಹಿಂಬಾಲಿಸಿದ್ದ ಆರೋಪಿಗಳು, ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿ ಯಲ್ಲಿ ದ್ವಿಚಕ್ರ ವಾಹನ ಕದ್ದಿದ್ದ ಆರೋಪಿಗಳು, ಅದನ್ನೇ ಸರಗ ಳವು ಕೃತ್ಯಕ್ಕೆ ಬಳಸಿದ್ದರು. ಜೊತೆಗೆ, ದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸುಲಿಗೆ ಪ್ರಕರಣದಲ್ಲೂ ಆರೋಪಿಗಳು ಭಾಗಿಯಾಗಿದ್ದ ಸಂಗತಿ ತನಿಖೆಯಿಂದ ಗೊತ್ತಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT