ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಗಳಲ್ಲಿ ಕಳ್ಳತನ ಮಾಡಿ ಪರಾರಿ: ಬೈಕ್ ಕದ್ದು ಸಿಕ್ಕಿಬಿದ್ದ

Published 28 ಮೇ 2024, 15:40 IST
Last Updated 28 ಮೇ 2024, 15:40 IST
ಅಕ್ಷರ ಗಾತ್ರ

ಬೆಂಗಳೂರು: ಬೈಕ್ ಕಳ್ಳತನ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಆರೋಪಿ ಮಿಥುನ್ ಅಲಿಯಾಸ್ ಮಿಲ್ಕಿ (22) ಎಂಬಾತ, ಹಲವು ಮನೆಗಳಲ್ಲಿ ಕಳ್ಳತನ ಮಾಡಿದ್ದನೆಂಬ ಸಂಗತಿ ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

‘ಫೆಬ್ರುವರಿ 12ರಂದು ನಡೆದಿದ್ದ ಬೈಕ್ ಕಳ್ಳತನ ಪ್ರಕರಣದಲ್ಲಿ ಮಿಥುನ್‌ನನ್ನು ಮೇ 17ರಂದು ಬಂಧಿಸಲಾಗಿತ್ತು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ 10 ದಿನ ಕಸ್ಟಡಿಗೆ ಪಡೆಯಲಾಗಿತ್ತು. ತನಿಖೆ ಮುಂದುವರಿಸಿದಾಗ, ಆರೋಪಿ ಮನೆಗಳಲ್ಲಿ ಕಳ್ಳತನ ಮಾಡಿರುವುದು ಪತ್ತೆಯಾಗಿದೆ’ ಎಂದು ಪೊಲೀಸರು ಹೇಳಿದರು.

‘ನಗರ ಹಲಸೂರು, ಮೈಸೂರಿನ ಆಲನಹಳ್ಳಿ, ಹಾಸನದ ಪೆನ್ಶನ್ ಮೊಹಲ್ಲಾ, ಆಂಧ್ರಪ್ರದೇಶದ ಅಲಿಪಿರಿ ಠಾಣೆ ವ್ಯಾಪ್ತಿಯ ಮನೆಗಳಲ್ಲಿ ಆರೋಪಿ ಕಳ್ಳತನ ಮಾಡಿ ಪರಾರಿಯಾಗಿದ್ದ. ಈತನ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ನಾಗಸಂದ್ರ ವೃತ್ತದ ಬಳಿ ಆರೋಪಿ ನಮಗೆ ಸಿಕ್ಕಿಬಿದ್ದಿದ್ದ’ ಎಂದು ತಿಳಿಸಿದರು.

‘ಆರೋಪಿ ವಿರುದ್ಧ ವಿವಿಧ ಠಾಣೆಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ. ಈತನಿಂದ ₹ 8.70 ಲಕ್ಷ ಮೌಲ್ಯದ 75 ಗ್ರಾಂ ಚಿನ್ನಾಭರಣ ಹಾಗೂ 4.9 ಕೆ.ಜಿ ಗ್ರಾಂ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT