ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ ಕಳವು: ಮೂವರು ಆರೋಪಿಗಳ ಸೆರೆ

Published 21 ಫೆಬ್ರುವರಿ 2024, 14:24 IST
Last Updated 21 ಫೆಬ್ರುವರಿ 2024, 14:24 IST
ಅಕ್ಷರ ಗಾತ್ರ

ಬೆಂಗಳೂರು: ವೈಟ್‌ಫೀಲ್ಡ್‌ ವಿಭಾಗದ ವಿವಿಧ ಬಡಾವಣೆಗಳಲ್ಲಿ ಮನೆ ಎದುರು ಹಾಗೂ ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಾರ್ಯಾಚರಣೆ ನಡೆಸಿದ ಮಾರತ್ತಹಳ್ಳಿ ಠಾಣೆ ಪೊಲೀಸರು, ಆಂಧ್ರಪ್ರದೇಶದ ಆನಂದ್(32) ಮತ್ತು ಸೇಠ್ ಮಿಲ್ ವಾಲಿ(35) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

‘ಆರೋಪಿಗಳಿಂದ ₹35 ಲಕ್ಷ ಮೌಲ್ಯದ 40 ಬೈಕ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ಆರೋಪಿಗಳ ಬಂಧನದಿಂದ ಮಾರತ್ತಹಳ್ಳಿ 3, ಮಹದೇವಪುರ ಠಾಣೆಯಲ್ಲಿ ದಾಖಲಾಗಿದ್ದ 1 ಪ್ರಕರಣ ಪತ್ತೆಯಾಗಿದೆ. ಕಳವು ಮಾಡಿದ ಬೈಕ್‌ಗಳನ್ನು ಕಡಿಮೆ ಮೊತ್ತಕ್ಕೆ ಮಾರಾಟ ಮಾಡಿ ಬಂದ ಹಣದಲ್ಲಿ ಮೋಜಿನ ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ಹೇಳಿದರು.

ಮತ್ತೊಂದು ಪ್ರಕರಣದಲ್ಲಿ ಮನೆ ಮುಂದೆ ನಿಲುಗಡೆ ಮಾಡಿದ್ದ ಬೈಕ್ ಕಳವು ಮಾಡುತ್ತಿದ್ದ ಆರೋಪಿಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಶರತ್ ಬಾಬು(40) ಬಂಧಿತ ಆರೋಪಿ.

‘ಆರೋಪಿಯಿಂದ ₹8 ಲಕ್ಷ ಮೌಲ್ಯದ 19 ಬೈಕ್‌ ಜಪ್ತಿ ಮಾಡಲಾಗಿದೆ. ಈತನ ಬಂಧನದಿಂದ ಕಾಡುಗೋಡಿ 6, ವೈಟ್‌ಫೀಲ್ಡ್‌ 1 ಮತ್ತು ಸರ್ಜಾಪುರ ಠಾಣೆಯಲ್ಲಿ ದಾಖಲಾಗಿದ್ದ 1 ಪ್ರಕರಣಗಳು ಪತ್ತೆಯಾಗಿವೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT