ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ ಕಳವು: ಇಬ್ಬರ ಬಂಧನ

Published 19 ಜನವರಿ 2024, 16:31 IST
Last Updated 19 ಜನವರಿ 2024, 16:31 IST
ಅಕ್ಷರ ಗಾತ್ರ

ಬೆಂಗಳೂರು: ಮನೆಯ ಎದುರು ನಿಲುಗಡೆ ಮಾಡಿರುವ ಬೈಕ್‌ಗಳ ಹ್ಯಾಂಡಲ್‌ ಲಾಕ್ ತೆಗೆದು ಬೈಕ್ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಲ್ಸನ್‌ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿಲ್ಸನ್‌ಗಾರ್ಡನ್‌ ನಿವಾಸಿಗಳಾದ ಅರ್ಷದ್ ಖಾನ್, ಪ್ರದೀಪ್ ಬಂಧಿತರು.

ಬಂಧಿತರಿಂದ ₹4 ಲಕ್ಷ ಮೌಲ್ಯದ ಏಳು ಬೈಕ್‌, 1 ಕಾರು ಜಪ್ತಿ ಮಾಡಿಕೊಳ್ಳಲಾಗಿದೆ.

‘ರಾತ್ರಿ ವೇಳೆ ಮನೆ ಎದುರು ನಿಲುಗಡೆ ಮಾಡುತ್ತಿದ್ದ ಬೈಕ್‌ಗಳನ್ನೇ ಗುರಿಯಾಗಿಸಿ ಕಳವು ಮಾಡುತ್ತಿದ್ದರು. ಬಳಿಕ ಕಡಿಮೆ ಬೆಲೆಗೆ ಮಾರಾಟ ಮಾಡಿ ಅದರಿಂದ ಬಂದ ಹಣದಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದರು. ವಿಲ್ಸನ್‌ಗಾರ್ಡನ್ ಸೇರಿದಂತೆ ನಗರದ ಬೇರೆ ಬೇರೆ ಠಾಣೆಗಳ ವ್ಯಾಪ್ತಿಯಲ್ಲಿ ಇಬ್ಬರು ಆರೋಪಿಗಳು ಬೈಕ್‌ ಕಳವು ನಡೆಸಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT