ಬುಧವಾರ, ಸೆಪ್ಟೆಂಬರ್ 22, 2021
23 °C

‌ಬೆಂಗಳೂರು: ಐದು ಬೈಕ್ ಜಪ್ತಿ, ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನ ಕದ್ದಿದ್ದ ಆರೋಪದಡಿ ಇಬ್ಬರನ್ನು ಕಾಟನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ. 

ಅಬ್ದುಲ್ ರೆಹಮಾನ್ ಮತ್ತು ಶಹಬುದ್ದೀನ್‌ ಬಂಧಿತ ಆರೋಪಿಗಳು.

‘ಠಾಣಾ ವ್ಯಾಪ್ತಿಯ ಮನೆಯೊಂದರ ಬಳಿ ನಿಲ್ಲಿಸಿದ್ದ ಬೈಕ್ ಜೂನ್‌ 1ರಂದು ಕಳವಾಗಿತ್ತು. ಈ ಸಂಬಂಧ ಬೈಕ್‌ ಮಾಲೀಕ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಬೆನ್ನತ್ತಿದಾಗ ಈ ಇಬ್ಬರು ಸಿಕ್ಕಿಬಿದ್ದಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

‘ಆರೋಪಿಗಳು ಕಾಟನ್‌ಪೇಟೆ, ಸಿಟಿ ಮಾರ್ಕೆಟ್, ಇಂದಿರಾನಗರ, ಹೈಗ್ರೌಂಡ್ಸ್‌ ಸೇರಿದಂತೆ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಕೆಟಿಎಂ, ಪಲ್ಸರ್‌ನಂತಹ ಬೈಕ್‌ಗಳನ್ನು ಕದ್ದಿದ್ದರು. ಆರೋಪಿಗಳನ್ನು ದಸ್ತಗಿರಿ ಮಾಡಿ, ಕಳ್ಳತನ ಮಾಡಿದ್ದ ₹10 ಲಕ್ಷ ಬೆಲೆ ಬಾಳುವ ಐದು ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.