ಶುಕ್ರವಾರ, ಆಗಸ್ಟ್ 12, 2022
23 °C

ಸ್ಕೂಟಿ–ಬೈಕ್ ಡಿಕ್ಕಿ: ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಜಯನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸವಾರ ಮಿಥುನ್ ಎಂಬುವರು ಮೃತಪಟ್ಟಿದ್ದಾರೆ.

‘ಸ್ಥಳೀಯ ಪಟ್ಟೆಗಾರಪಾಳ್ಯ ನಿವಾಸಿ ಮಿಥುನ್, ದಿನಪತ್ರಿಕೆಗಳ ವಿತರಣೆ ಕೆಲಸ ಮಾಡುತ್ತಿದ್ದರು. ಮೇ 30ರಂದು ಸ್ನೇಹಿತನ ಜೊತೆ ಸ್ಕೂಟಿಯಲ್ಲಿ ಹೊರಟಿದ್ದಾಗ, ಎದುರಿಗೆ ಬಂದ ಬೈಕ್ ಡಿಕ್ಕಿ ಹೊಡೆದು ಅವಘಡ ಸಂಭವಿಸಿತ್ತು. ಈ ಅಪಘಾತದ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದು ಪೊಲೀಸರು ಹೇಳಿದರು.

‘ಬೆಳಿಗ್ಗೆ ಪತ್ರಿಕೆ ವಿತರಣೆ ಪೂರ್ಣಗೊಳಿಸಿದ್ದ ಮಿಥುನ್, ಸ್ಕೂಟಿ ಚಲಾಯಿಸಿಕೊಂಡು ಮನೆಯತ್ತ ತೆರಳುತ್ತಿದ್ದರು. ಹಿಂಬದಿಯಲ್ಲಿ ಸ್ನೇಹಿತ ಕುಳಿತಿದ್ದರು. ಕಿರಣ್‌ ಎಂಬುವರು ಚಲಾಯಿಸುತ್ತಿದ್ದ ಬೈಕ್, ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಎರಡೂ ವಾಹನಗಳು ಉರುಳಿಬಿದ್ದಿದ್ದವು. ಮೂವರು ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದರು. ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಮಿಥುನ್ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು