ಬೆಂಗಳೂರು: ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಅಕ್ಷಯ್ ಅವರ ಮಿದುಳು ಸಂಪೂರ್ಣ ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬನಶಂಕರಿಯ ಬ್ರಹ್ಮಚೈತನ್ಯ ಮಂದಿರದ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಭಾನುವಾರ ಜೋರು ಗಾಳಿಗೆ ಮರದ ಕೊಂಬೆ ಮುರಿದು, ಅಕ್ಷಯ್ (29) ತಲೆಗೆ ಬಿದ್ದಿತ್ತು. ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದರು.

ತಲೆ ಬುರುಡೆಯಲ್ಲಿ ಹತ್ತಕ್ಕೂ ಅಧಿಕ ಕಡೆ ಗಾಯವಾಗಿತ್ತು. ವೈದ್ಯರು ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದರು. ಆದರೆ, ಶಸ್ತ್ರಚಿಕಿತ್ಸೆ ನಡೆದು 60 ತಾಸು ಕಳೆದ ಬಳಿಕವೂ ಮಿದುಳು ಸ್ಪಂದಿಸದ ಕಾರಣ, ಮಿದುಳು ನಿಷ್ಕ್ರಿಯಗೊಂಡಿದೆ ಎಂದು ಪರಿಗಣಿಸಿರುವುದಾಗಿ ವೈದ್ಯರು ಹೇಳಿದ್ದಾರೆ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಕ್ಷಯ್ ಅವರ ವೈದ್ಯಕೀಯ ಚಿಕಿತ್ಸಾ ವೆಚ್ಚದ ಬಿಲ್ ₹ 4.6 ಲಕ್ಷವನ್ನು ಬಿಬಿಎಂಪಿ ಅಧಿಕಾರಿಗಳು ಪಾವತಿ ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿರುವ ಅಕ್ಷಯ್ ಬದುಕಿ ಬರಲಿ ಎಂದು ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.