ಶುಕ್ರವಾರ, ಮಾರ್ಚ್ 24, 2023
30 °C

₹ 3.50 ಲಕ್ಷ ಮೌಲ್ಯದ ಬೈಕ್‌ಗಳ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೆಗ್ಗನಹಳ್ಳಿ ಕ್ರಾಸ್‌ನ ಸಂಜೀವಿನಿ ಪುರದ ಸಾಗರ್‌ (19) ಹಾಗೂ ಅಂದ್ರಹಳ್ಳಿ ಮುಖ್ಯರಸ್ತೆಯ ಚೇತನ್‌ ವೃತ್ತದ ಬನಶಂಕರಿ ಜನರಲ್‌ ಸ್ಟೋರ್ ಬಳಿಯ ನಿವಾಸಿ ಗಣೇಶ್ (20) ಬಂಧಿತ ಆರೋಪಿಗಳು.

‘ಬಂಧಿತರು ಬ್ಯಾಡರಹಳ್ಳಿ, ಕಾಮಾಕ್ಷಿಪಾಳ್ಯ, ಯಶವಂತಪುರ, ಹಾಗೂ ಕ್ಯಾತಸಂದ್ರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ ಕಳವು ಮಾಡಿ ಗ್ಯಾರೇಜ್‌ಗಳಿಗೆ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ ₹ 3.50 ಲಕ್ಷದ ಬೈಕ್‌ ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು