ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಭಾರತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಅರುಣ್ ಮತ್ತು ನವೀನ್ ಬಂಧಿತರು. ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಿರಣ್, ವಿಮಲ್, ಪ್ರದೀಪ್, ಮದನ್ ಹಾಗೂ ಸ್ಯಾಮ್ಯುವೆಲ್ನನ್ನು ಈ ಹಿಂದೆ ಬಂಧಿಸಲಾಗಿತ್ತು.

ಪ್ರಕರಣದ 5ನೇ ಆರೋಪಿಯಾಗಿರುವ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಬಸವರಾಜು ಅವರನ್ನು ಶನಿವಾರ ವಿಚಾರಣೆ ನಡೆಸಲಾಗಿತ್ತು. ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಜಗದೀಶ ಅಲಿಯಾಸ್ ಜಗ್ಗನಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಶಿವಪ್ರಕಾಶ್ನನ್ನು ಹಲಸೂರು ಮನೆಯ ಎದುರು ಕಳೆದ ಮಂಗಳವಾರ ರಾತ್ರಿ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ಶಿವಪ್ರಕಾಶ್ ವಿರುದ್ಧ ನಗರದ ವಿವಿಧ ಠಾಣೆಗಳು ದೂರು ದಾಖಲಾಗಿತ್ತು. ಭಾರತಿನಗರ ಠಾಣೆಯಲ್ಲಿ ಶಿವಪ್ರಕಾಶ್ ವಿರುದ್ಧ 2023ರಲ್ಲಿ ರೌಡಿ ಪಟ್ಟಿ ತೆರೆಯಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.