ಬೆಂಗಳೂರು: ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದ ಮೊದಲನೇ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನ ಹೆಸರನ್ನು ಮತ್ತೆ ರೌಡಿಪಟ್ಟಿಗೆ ಸೇರಿಸಲಾಗಿದೆ.

ಈ ಹಿಂದೆಯೂ ಜಗ್ಗನ ಹೆಸರು ರೌಡಿ ಪಟ್ಟಿಯಲ್ಲಿತ್ತು. ಕೆಲವು ತಿಂಗಳ ಹಿಂದೆ ರೌಡಿಪಟ್ಟಿಯಿಂದ ಆತನ ಹೆಸರನ್ನು ಕೈಬಿಡಲಾಗಿತ್ತು. ಇದೀಗ ಜಗದೀಶ್ ವಿರುದ್ಧ ಮತ್ತೆ ಭಾರತಿನಗರ ಪೊಲೀಸ್ ಠಾಣೆಯಲ್ಲಿ ರೌಡಿಪಟ್ಟಿ ತೆರೆಯಲಾಗಿದೆ. ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜಗದೀಶ್ ಸಿಐಡಿ ಕಸ್ಟಡಿಯಲ್ಲಿದ್ದಾನೆ.

ಜುಲೈ 15ರಂದು ಶಿವಪ್ರಕಾಶ್ ಅವರ ಕೊಲೆ ನಡೆದಿತ್ತು. ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿತ್ತು. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಜಗದೀಶ್ನನ್ನು ಇತ್ತೀಚೆಗೆ ಸಿಐಡಿ ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದರು. ಬಳಿಕ, ನಗರಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.